ಮುಂಬೈ: ಬಾಲಿವುಡ್ನ ಖ್ಯಾತ ನಟ ಅಕ್ಷಯ್ ಕುಮಾರ್ ನಟನೆಯ 'ಓ ಮೈ ಗಾಡ್ 2' (OMG 2), ಇದೀಗ ಬ್ಲಾಕ್ಬಸ್ಟರ್ ಚಿತ್ರವಾಗಿ ಹೊರಹೊಮ್ಮಿದ್ದು, ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿಸಿದಂತೆ ಉತ್ತಮ ಗಳಿಕೆಯನ್ನು ಕಂಡಿದೆ.
ಇದನ್ನೂ ಓದಿ: DK Shivakumar Reacts Over KH Muniyappa’s Statement | ಕೆ.ಎಚ್. ಮುನಿಯಪ್ಪ ಹೇಳಿಕೆ ಬಗ್ಗೆ ಡಿಕೆಶಿ ಹೇಳಿದ್ದೇನು?
ಅಮಿತ್ ರೈ ನಿರ್ದೇಶನದ 'ಓ ಮೈ ಗಾಡ್ 2' ಚಿತ್ರವು ಇದೀಗ ಬಾಕ್ಸ್ ಆಫೀಸ್ನಲ್ಲಿ 100 ಕೋಟಿ ರೂ. ಕಲೆಕ್ಷನ್ ಗುರಿಯನ್ನು ತಲುಪುವಲ್ಲಿ ಯಶಸ್ವಿಯಾಗಿದೆ. ಚಿತ್ರಮಂದಿರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಸಿನಿಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿರುವ ಚಿತ್ರ, ಕೇವಲ ಶನಿವಾರ (ಆಗಸ್ಟ್ 19) ಒಂದೇ ದಿನದಲ್ಲಿ 10.26 ಕೋಟಿ ರೂ. ಗಳಿಕೆಯನ್ನು ಕಂಡಿದೆ. ಈ ಕುರಿತು ಚಿತ್ರ ತಯಾರಕರು ಸಂತಸ ವ್ಯಕ್ತಪಡಿಸಿದ್ದಾರೆ.
ವಯಾಕಾಮ್ 18 ಸ್ಟುಡಿಯೋಸ್, ಕೇಪ್ ಆಫ್ ಗುಡ್ ಫಿಲ್ಮ್ಸ್ ಮತ್ತು ವಕಾವೂ ಫಿಲ್ಮ್ ಪ್ರೊಡಕ್ಷನ್‌ನ ಸಹಯೋಗದಲ್ಲಿ ನಿರ್ಮಾಣಗೊಂಡಿರುವ ಓ ಮೈ ಗಾಡ್ 2 ಚಿತ್ರದಲ್ಲಿ ಅಕ್ಷಯ್ ಕುಮಾರ್ ಮತ್ತು ಯಾಮಿ ಗೌತಮ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಪಂಕಜ್ ತ್ರಿಪಾಠಿ, ಗೋವಿಂದ್ ನಮದೇವ್, ಅರುಣ್ ಗೋವಿಲ್ ಸೇರಿದಂತೆ ಇತರ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ,(ಏಜೆನ್ಸೀಸ್).