ನ್ಯೂಸ್

ಅ.20 ರಂದು 2024ನೇ ಸಾಲಿನ ಸಂಸ್ಕೃತಿ - ಸಂಗಮ ಪ್ರಶಸ್ತಿ ಪ್ರದಾನ ಸಮಾರಂಭ.

ಬೆಂಗಳೂರು:2024 ನೇ ಸಾಲಿನ ಸಂಸ್ಕೃತಿ - ಸಂಗಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅ. 20 ರಂದು ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ್ ತಿಳಿಸಿದ್ದಾರೆ.

ಈ ಬಾರಿಯ ಸಂಗಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಚನ ಸಾಹಿತ್ಯ , ಕ್ಷೇತ್ರದ ಜೀವಮಾನ ಸಾಧನೆಗಾಗಿ ಡಾ. ಬಸವರಾಜ ಸಬರದ, ದಾಸ ಸಾಹಿತ್ಯ ಕ್ಷೇತ್ರದಲ್ಲಿನ ಜೀವಮಾನ ಸಾಧನೆಗೆ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ, ಜಾನಪದ ಸಾಹಿತ್ಯ ಕ್ಷೇತ್ರದಲ್ಲಿನ ಜೀವಮಾನ ಸಾಧನೆಗೆ ಡಾ. ಬಸವರಾಜ ನೆಲ್ಲಿಸ, ಸಂಗೀತ ಕ್ಷೇತ್ರದಲ್ಲಿನ ಜೀವಮಾನ ಸಾಧನೆಗೆ ಡಾ. ಜಯದೇವಿ ಜಂಗಮಶೆಟ್ಟಿ ಅವರುಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಕಾರ್ಯಕ್ರಮವನ್ನು ಬೆಳಗಾವಿ ಜಿಲ್ಲೆಯ ನಾಗನೂರು ಶ್ರೀ ರುದ್ರಾಕ್ಷಿ ಮಠದ ಡಾ. ಅಲ್ಲಮ ಪ್ರಭು ಮಹಾ ಸ್ವಾಮೀಜಿ, ಕೇಂದ್ರದ ಜಲ ಶಕ್ತಿ ಹಾಗೂ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣನವರು ಈ ಸಮಾರಂಭದ ಉದ್ಘಾಟನೆ ನೆರವೇರಿಸಿ ಪ್ರತಿಷ್ಠಿತ ಸಂಸ್ಕೃತಿ ಸಂಗಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ ಎಂದರು.

ಹಿರಿಯ ಸಾಹಿತಿ ನಾಡೋಜ ಡಾ. ಹಂ.ಪ.ನಾಗರಾಜಯ್ಯ ಉಪಸ್ಥಿತಿಯಲ್ಲಿ ಪರಿಚಯಾತ್ಮಕ ಸಂಸ್ಕೃತಿ ಸಂಗಮ ಎಂಬ ವಿಶೇಷ ಸಂಚಿಕೆಯನ್ನು ಕಿರುತರೆ ನಿರ್ದೇಶಕ ಟಿ. ಎನ್. ಸೀತಾರಂ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ 10 ಗಂಟೆಗೆ ಪ್ರಖ್ಯಾತ ಹಿಂದುಸ್ತಾನಿ ಗಾಯಕ ಡಾ. ಜಯದೇವಿ ಜಂಗಮ ಶೆಟ್ಟಿ ಅವರಿಂದ ವಚನ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.