ನ್ಯೂಸ್

ಗುಜರಾತ್​ನಲ್ಲಿ ಗಣೇಶ ಮೂರ್ತಿಗೆ ಪೆಂಡಾಲ್ ಹಾಕುವ ವೇಳೆ ವಿದ್ಯುತ್ ಸ್ಪರ್ಶ; ವ್ಯಕ್ತಿ ಸಾವು

ಗುಜರಾತ್​: ಗುಜರಾತ್​​ ವಡೋದರಾ ಜಿಲ್ಲೆಯ ದಬಕಾ ಗ್ರಾಮದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮಂಟಪ ಸಿದ್ಧಪಡಿಸುತ್ತಿದ್ದ ವೇಳೆ ವಿದ್ಯುತ್ ತಗುಲಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 11.45ರ ಸುಮಾರಿಗೆ ದಬಕಾ ಗ್ರಾಮದ ದೇವಸ್ಥಾನವೊಂದರ ಬಳಿ ಗ್ರಾಮಸ್ಥರೆಲ್ಲರು ಗಣೇಶ ಮೂರ್ತಿ ಪ್ರತಿಷ್ಠಾಪಣೆ ಮಾಡಲು ಮಂಟಪ ಸಿದ್ಧಪಡಿಸುತ್ತಿದ್ದರು. ಈ ವೇಳೆ ವಿದ್ಯುತ್​ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೃತ ವ್ಯಕ್ತಿಯನ್ನು ಪ್ರಕಾಶ್ ಜಾಧವ್ ಗುರುತಿಸಲಾಗಿದೆ. ಜಾಧವ್ ಹಿಡಿದಿದ್ದ ಕಬ್ಬಿಣದ ರಾಡ್ ಹೈಟೆನ್ಷನ್​ ತಂತಿಗೆ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.