ಹೊಳೆನರಸೀಪುರ: ಪಟ್ಟಣದ ಒಂದನೇ ವಾರ್ಡ್ ವ್ಯಾಪ್ತಿಯ ಸೂರನಹಳ್ಳಿ ಬಡಾವಣೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಒಬ್ಬ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮತ್ತಿಬ್ಬರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ.

ಆದಿಚುಂಚನಗಿರಿ ಕ್ಷೇತ್ರಕ್ಕೆ ಹೊರಡಲು ಸಿದ್ಧವಾಗಿ ರಸ್ತೆ ಬದಿ ನಿಂತಿದ್ದ ನಾಲ್ವರಿಗೆ ಎದುರಿನಿಂದ ಬಂದ ಫಾರ್ಚುನರ್ ಕಾರು ಗುದ್ದಿದೆ. ಪರಿಣಾಮ ಸೂರನಹಳ್ಳಿಯ ಎಸ್.ಕೆ.ಮನು (27) ಸ್ಥಳದಲ್ಲೇ ಮೃತಪಟ್ಟಿದ್ದು, ಅಭಿಷೇಕ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಾಕೇಶ್, ಕುಶಾಲ್‌ಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ.
ಕಾರು ಚಾಲನೆ ಮಾಡುತ್ತಿದ್ದ ಸೂರನಹಳ್ಳಿ ಗ್ರಾಮದ ಯುವಕ ಪರಾರಿಯಾಗಿದ್ದು, ಈ ಸಂಬಂಧ ಪಟ್ಟಣದ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.