ನ್ಯೂಸ್

ಒನ್​ ಸೈಡ್​ ಲವ್; ದೂರು ನೀಡಿದ ಶಿಕ್ಷಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿ| One Side Love

One Side Love: ಮಧ್ಯಪ್ರದೇಶದ ನರಸಿಂಹಪುರ ಜಿಲ್ಲೆಯಲ್ಲಿ 18 ವರ್ಷದ ವಿದ್ಯಾರ್ಥಿಯೊಬ್ಬ ತಾನು ಹಿಂದೆ ಕಲಿತ ಶಾಲೆಯ 26 ವರ್ಷದ ಅತಿಥಿ ಶಿಕ್ಷಕಿಯೊಬ್ಬರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆಘಾತಕಾರಿ ಘಟನೆ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿಯನ್ನು ನರಸಿಂಹಪುರ ಜಿಲ್ಲೆಯ ಕೋಟವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಎಕ್ಸಲೆನ್ಸ್ ಸ್ಕೂಲ್‌ನ (ಉತ್ಕೃಷ್ಟ ವಿದ್ಯಾಲಯ) ಮಾಜಿ ವಿದ್ಯಾರ್ಥಿ ಸೂರ್ಯಾಂಶ್ ಕೊಚಾರ್ ಎಂದು ಗುರುತಿಸಲಾಗಿದೆ. ಶಿಕ್ಷಕಿ ಮೇಲೆ ಆರೋಪಿಗೆ ಒನ್​ ಸೈಡ್ ಲವ್​ ಇತ್ತು ಎನ್ನಲಾಗಿದೆ. ಆತನ ವಿರುದ್ಧ ದೂರು ನೀಡಿದ್ದರಿಂದ ಉಂಟಾದ ವೈಯಕ್ತಿಕ ಕೋಪದಿಂದ ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದೆ.

ಸೋಮವಾರ ಮಧ್ಯಾಹ್ನ 3:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಆರೋಪಿ ಪೆಟ್ರೋಲ್ ತುಂಬಿದ ಬಾಟಲಿಯನ್ನು ತೆಗೆದುಕೊಂಡು ಶಿಕ್ಷಕಿಯ ಮನೆಗೆ ಹೋಗಿದ್ದಾನೆ. ತಕ್ಷಣೆ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಶೇ. 10-15 ರಷ್ಟು ಸುಟ್ಟ ಗಾಯಗಳಾಗಿರುವ ಸಂತ್ರಸ್ತೆಯನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಟ್ಟಗಾಯಗಳು ಗಂಭೀರವಾಗಿದ್ದರೂ, ಜೀವಕ್ಕೆ ಅಪಾಯವಿಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಉಪವಿಭಾಗೀಯ ಪೊಲೀಸ್ ಅಧಿಕಾರಿ ಮನೋಜ್ ಗುಪ್ತಾ, "ಆರೋಪಿ ಮತ್ತು ಶಿಕ್ಷಕಿ ಎರಡು ವರ್ಷಗಳಿಗೂ ಹೆಚ್ಚು ಕಾಲ ಪರಸ್ಪರ ಪರಿಚಿತರಾಗಿದ್ದರು. ಸೂರ್ಯಾಂಶ್ ಶಿಕ್ಷಕಿ ಬಗ್ಗೆ ಒನ್ ಸೈಡ್ ಲವ್ ಬೆಳಸಿಕೊಂಡಿದ್ದನು. ಆರೋಪಿ ವಿದ್ಯಾರ್ಥಿನಿಯನ್ನು ಒಂದೆರಡು ವರ್ಷಗಳ ಹಿಂದೆ ಶಿಕ್ಷಕಿ ಬೋಧಿಸುತ್ತಿದ್ದ ಶಾಲೆಯಿಂದ ಹೊರಹಾಕಲಾಗಿತ್ತು. ಅವನು ಬೇರೆ ಶಾಲೆಯಲ್ಲಿ ಓದುತ್ತಿದ್ದನು. ಶಾಲೆಯ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಆರೋಪಿ ಶಿಕ್ಷಕಿ ವಿರುದ್ಧ ಮಾಡಿ ಆಕ್ಷೇಪಾರ್ಹ ಹೇಳಿಕೆ ಬಗ್ಗೆ ದೂರು ನೀಡಿದ್ದರಿಂದ ಕೋಪಗೊಂಡು ಕೃತ್ಯ ಎಸಗಿದ್ದಾನೆ. ಈ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಆರೋಪಿ ವಿರುದ್ಧ ಸೆಕ್ಷನ್ 124A ಮತ್ತು ಇತರ ಸಂಬಂಧಿತ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕೊತ್ವಾಲಿ ಪೊಲೀಸರು ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಿ, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಡೊಂಗರ್ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣಪುರ ಗ್ರಾಮದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ವಿವರವಾದ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. (ಏಜೆನ್ಸೀಸ್)