ನ್ಯೂಸ್

ಏಳು ಪ್ರಯಾಣಿಕರಿದ್ದ ಹೆಲಿಕಾಪ್ಟರ್​ ಸಮುದ್ರದ ಮೇಲೆ ತುರ್ತು ಲ್ಯಾಂಡಿಂಗ್​: ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಮುಂಬೈ: ಏಳು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್​​ ಅನ್ನು ಅರಬ್ಬೀ ಸಮುದ್ರದ ಮೇಲೆ ತುರ್ತು ಲ್ಯಾಂಡಿಂಗ್​ ಮಾಡಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ತೈಲ ಮತ್ತು ನೈಸರ್ಗಿಕ ಅನಿಲ ಲಿಮಿಟೆಡ್​​ (ಒಎನ್​ಜಿಸಿ) ಟ್ವೀಟ್​ ಮೂಲಕ ತಿಳಿಸಿದೆ.

ಸದ್ಯಕ್ಕೆ ನಾಲ್ವರನ್ನು ರಕ್ಷಿಸಲಾಗಿದ್ದು, ಉಳಿದವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದೆ. ಮುಂಬೈ ವಿಭಾಗದ ಅಧಿಕಾರಿಗಳು ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ.

ಒಎನ್​ಜಿಸಿ ಸಂಸ್ಥೆಯ ಸಿಬ್ಬಂದಿ ಈ ಹೆಲಿಕಾಪ್ಟರ್​​ನಲ್ಲಿ ಪ್ರಯಾಣಿಸುತ್ತಿದ್ದರು, ಕಾರ್ಯ ನಿಮಿತ್ತ ತೆರಳಿದ್ದರು. ಈ ವೇಳೆ ಹೆಲಿಕಾಪ್ಟರ್​ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದರಿಂದ ತಕ್ಷಣವೇ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ ಎಂದು ಸಂಸ್ಥೆ ಹೇಳಿದೆ. ಆದರೆ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ. (ಏಜೆನ್ಸೀಸ್​)