ನ್ಯೂಸ್

ಆನ್​ಲೈನ್​ ಗೇಮಿಂಗ್​ ಪ್ರಕರಣ; ಚಿತ್ರದುರ್ಗ ಶಾಸಕ 'ಕೆ.ಸಿ ವಿರೇಂದ್ರ ಪಪ್ಪಿ'ಯನ್ನು ಬಂಧಿಸಿದ ಇಡಿ| ED

online gaming case: ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಅವರನ್ನು ಸಿಕ್ಕಿಂನಲ್ಲಿ ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಇಂದು (ಆ.23) ಮಾಹಿತಿ ನೀಡಿದೆ.

ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಗ್ಯಾಂಗ್ಟಕ್, ಚಿತ್ರದುರ್ಗ ಜಿಲ್ಲೆ, ಬೆಂಗಳೂರು ನಗರ, ಹುಬ್ಬಳ್ಳಿ, ಜೋಧ್‌ಪುರ, ಮುಂಬೈ ಮತ್ತು ಗೋವಾ ಸೇರಿದಂತೆ ಭಾರತದಾದ್ಯಂತ 31 ಸ್ಥಳಗಳಲ್ಲಿ ಪಪ್ಪೀಸ್ ಕ್ಯಾಸಿನೊ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ, ಬಿಗ್ ಡ್ಯಾಡಿ ಕ್ಯಾಸಿನೊ ಜೊತೆ 5 ಕ್ಯಾಸಿನೊಗಳು ಸೇರಿದಂತೆ ಇಡಿ ಶೋಧ ಕಾರ್ಯಾಚರಣೆ ನಡೆಸಿದೆ.

ಈ ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಸುಮಾರು 12 ಕೋಟಿ ರೂ. ನಗದು, ಇದರಲ್ಲಿ ಅಂದಾಜು 1 ಕೋಟಿ ವಿದೇಶಿ ಕರೆನ್ಸಿ, ಸುಮಾರು 6 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಸುಮಾರು 10 ಕೆಜಿ ಬೆಳ್ಳಿ ವಸ್ತುಗಳು, ಆಸ್ತಿ ಸಂಬಂಧಿತ ದಾಖಲೆಗಳು ಮತ್ತು ನಾಲ್ಕು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ 17 ಬ್ಯಾಂಕ್ ಖಾತೆಗಳು ಮತ್ತು 2 ಬ್ಯಾಂಕ್ ಲಾಕರ್‌ಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಗ್ಯಾಂಗ್ಟಕ್‌ನಿಂದ ಬಂಧಿಸಿ ಸಿಕ್ಕಿಂನ ಗ್ಯಾಂಗ್ಟಕ್​ನ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಮತ್ತು ಬೆಂಗಳೂರಿನ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಅನುಮತಿ ಪಡೆಯಲಾಗಿದೆ.

(ಏಜೆನ್ಸೀಸ್)