ಬೆಂಗಳೂರು: ಸ್ಯಾಂಡಲ್ವುಡ್ನ ಪ್ರತಿಭಾವಂತ ನಟ, ನಿರ್ದೇಶಕ, ಬರಹಗಾರ ರಾಜ್ ಬಿ.ಶೆಟ್ಟಿ ಅಭಿನಯದ ಬಹುನಿರೀಕ್ಷಿತ 'ಟೋಬಿ' ಚಿತ್ರದ ಬಿಡುಗಡೆಗೆ ಇದೀಗ ಕೇವಲ 5 ದಿನಗಳು ಮಾತ್ರ ಬಾಕಿ ಉಳಿದಿದ್ದು, ಈ ಬಗ್ಗೆ ಸ್ವತಃ ರಾಜ್, ತಮ್ಮ ಟ್ವಿಟರ್ ಖಾತೆಯಲ್ಲಿ ಕಿರು ವಿಡಿಯೋ ಹಂಚಿಕೊಳ್ಳುವ ಮುಖೇನ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: B Dayananda, Bengaluru City Police Commissioner: ಎಷ್ಟು ಪೊಲೀಸ್ ಹುದ್ದೆಗಳ ನೇಮಕಾತಿ ನಡೆಯಲಿದೆ?
ಕನ್ನಡ ಚಿತ್ರರಂಗದಲ್ಲಿ ಕಳೆದ ತಿಂಗಳಲ್ಲಿ ಬಿಡುಗಡೆಗೊಂಡ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ', 'ಆಚಾರ್ & ಕೋ' ಮತ್ತು 'ಕೌಸಲ್ಯಾ ಸುಪ್ರಜ ರಾಮ' ಸೇರಿದಂತೆ ಇತ್ತೀಚಿಗೆ ರಿಲೀಸ್ ಆದ 'ಕ್ಷೇತ್ರಪತಿ' ಚಿತ್ರಗಳು ಚಿತ್ರಮಂದಿರದಲ್ಲಿ ಹೆಚ್ಚಿನ ಪ್ರದರ್ಶನದ ಜತೆ ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಕಲೆಕ್ಷನ್ ಕೂಡ ಮಾಡುತ್ತಿದೆ. ಈ ಸಿನಿಮಾಗಳು ಕನ್ನಡ ಸಿನಿಪ್ರೇಕ್ಷಕರನ್ನು ಥಿಯೇಟರ್ಗಳತ್ತ ಕರೆತರುವಲ್ಲಿ ಯಶಸ್ವಿಯಾಗಿದ್ದು, ಈ ಸಾಲಿಗೆ ಇದೀಗ ರಾಜ್ ಬಿ.ಶೆಟ್ಟಿ ನಟನೆಯ 'ಟೋಬಿ' ಕೂಡ ಸೇರ್ಪಡೆಯಾಗಲು ಸಜ್ಜಾಗಿದೆ.
ಇದನ್ನೂ ಓದಿ: ಎರಡು ತಿಂಗಳ ಹಿಂದೆ ಮದುವೆ; ಗಂಡನನ್ನು ಬಾತ್ರೂಮ್ನಲ್ಲಿ ಲಾಕ್ ಮಾಡಿ ಪ್ರಿಯತಮನ ಜತೆ ಮಹಿಳೆ ಎಸ್ಕೇಪ್
ಈ ಹಿಂದೆಯೇ ಚಿತ್ರತಂಡ ತಿಳಿಸಿದಂತೆ ಟೋಬಿ ಇದೇ ಆಗಸ್ಟ್ 25 ರಂದು ಬಹುತೇಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ನಟ ರಾಜ್ ಬಿ.ಶೆಟ್ಟಿ, ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆದ ಮೊದಲ ದಿನದಿಂದಲೂ ತಮ್ಮ ಅಭಿಮಾನಿಗಳಿಗೆ ಸಿನಿಮಾ ಕುರಿತು ನಿರಂತರವಾಗಿ ಮಾಹಿತಿ ನೀಡುತ್ತ ಬಂದಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಗೊಂಡ ಟ್ರೇಲರ್ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ, ಭರವಸೆಯನ್ನು ಮೂಡಿಸಿದ್ದು, ಚಿತ್ರದ ರಿಲೀಸ್ಗೆ ಕಾತರದಿಂದ ಕಾಯುತ್ತಿದ್ದಾರೆ.
ಟ್ರೇಲರ್ ಮೂಲಕ ಭಾರೀ ಸದ್ದು ಮಾಡುತ್ತಿರುವ ರಾಜ್ ಬಿ.ಶೆಟ್ಟಿ ಅವರ ಟೋಬಿ, ಚಿತ್ರಮಂದಿರಗಳಲ್ಲಿ ಬಿಡುಗಡೆಯ ನಂತರ ಯಾವ ರೀತಿ ಕಮಾಲ್ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.