ನ್ಯೂಸ್

ಎಲ್ಲೆಡೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ: ಓರ್ವ ವಿದ್ಯಾರ್ಥಿ ಡಿಬಾರ್

Webdesk - Athul Damale

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ವಿಜ್ಞಾನ ವಿಷಯದ ಪರೀಕ್ಷೆಯ ವೇಳೆ ಕಲಬುರಗಿಯಲ್ಲಿ ಪರೀಕ್ಷಾ ಅಕ್ರಮದಲ್ಲಿ ತೊಡಗಿದ್ದ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. ಉಳಿದಂತೆ ಎಲ್ಲೆಡೆ ಸುಸೂತ್ರವಾಗಿ ಪರೀಕ್ಷೆ ನಡೆಸಿದೆ.

ವಿಜ್ಞಾನದ ಪರೀಕ್ಷೆ ಬಿಟ್ಟವರೆಷ್ಟು ಜನ?

ವಿಜ್ಞಾನ ವಿಷಯದ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 8.27 ಲಕ್ಷ ವಿದ್ಯಾರ್ಥಿಗಳ ಪೈಕಿ 8.12 ಲಕ್ಷ (ಶೇ.98.16) ವಿದ್ಯಾರ್ಥಿಗಳು ಹಾಜರಾಗಿದ್ದರು. 15,213 ಮಂದಿ ಪರೀಕ್ಷೆಗೆ ಗೈರು ಹಾಜರಾಗಿದ್ದರು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.