ನ್ಯೂಸ್

ಬಲವಂತದ ಮತಾಂತರಕ್ಕೆ ನನ್ನ ವಿರೋಧವಿದೆ: ಸಿದ್ದರಾಮಯ್ಯ

ಮೈಸೂರು: ಬಲವಂತದ ಮತಾಂತರಕ್ಕೆ ನನ್ನ ವಿರೋಧವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಯಾರನ್ನೂ ಬಲವಂತವಾಗಿ ಮತಾಂತರ ಮಾಡಕೂಡದು. ಯಾರು ಯಾವ ಧರ್ಮ ಬೇಕಾದ್ರೂ ಪಾಲನೆ ಮಾಡಬಹುದು. ಸುಪ್ರೀಂ ಕೋರ್ಟ್ ಆದೇಶದ ಪರ ನಾವಿದ್ದೇವೆ ಎಂದರು.

ಕಾಂಗ್ರೆಸ್ ಬಸ್ ಯಾತ್ರೆ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಸ್ ಯಾತ್ರೆಗೆ ಇನ್ನೂ ದಿನಾಂಕ‌ ನಿಗದಿಯಾಗಿಲ್ಲ. ಬಸ್ ಸಿದ್ಧವಾಗುತ್ತಿದೆ. ಕೋಲಾರಕ್ಕೆ ಹೋಗಿ ಟೆಸ್ಟ್ ರನ್ ಆಗಿದೆ. ನಾನ್ನೊಂದು ಟೀಂ, ಡಿಕೆಶಿ ಒಂದು ಟೀಂ ಆಗಿ ಪ್ರಚಾರ ಮಾಡುತ್ತೇವೆ. ನಾವೇನು ಜೋತಿಷ್ಯ ನೋಡೋದಿಲ್ಲ. ಶೂನ್ಯ ಮಾಸದಲ್ಲಿ ಹುಟ್ಟಿದ ಮಕ್ಕಳೆಲ್ಲಾ ಏನ್ ಸತ್ತು ಹೋಗ್ತಾರಾ? ನಮಗೆ ರಾಹುಕಾಲ, ಗುಳಿಕ ಕಾಲ, ಯಮಗಂಡ ಕಾಲ... ಯಾವುದೂ ಇಲ್ಲ. ಎಲ್ಲವೂ ಒಳ್ಳೆಯ ಕಾಲವೇ ಎಂದರು.

ನವೆಂಬರ್ ಕೊನೇ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.