ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media)ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದೃಷ್ಟಿ ಭ್ರಮೆ ಎಂದರೇನು?
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion) ಎಂದು ಕರೆಯುತ್ತೇವೆ.
ಮೋಜಿನ ಮಾರ್ಗ
ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟ್ಟಿಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತವೆ.
ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….
ಸದ್ಯ ವೈರಲ್ ಆಗಿರುವ ಫೋಟೋದಲ್ಲಿ ಹಸಿರಿನಿಂದ ಕೂಡಿರುವ ಮೈದಾನವನ್ನು ಕಾಣಬಹುದು. ಮೈದಾನದ ನಡುವೆ ಕಪ್ಪು-ಬಿಳುಪು ಬಣ್ಣದಿಂದ ಕೂಡಿದ ಕುದರೆಯೊಂದು ನಿಂತಿದೆ. ಆದರೆ, ಅಲ್ಲಿರುವುದು ಒಂದೇ ಕುದುರೆಯಲ್ಲ ಇನ್ನೊಂದು ಕುದುರೆಯು ಅಲ್ಲಿದೆ. ಅದು ಎಲ್ಲಿದೆ ಎಂಬುದನ್ನು ಪತ್ತೆಹಚ್ಚಬೇಕು. ಆದರೆ, ಅದನ್ನು ಪತ್ತೆಹಚ್ಚುವುದು ಅಷ್ಟು ಸುಲಭವಲ್ಲ. ಕಣ್ಣಿಗೆ ಮಾತ್ರ ಕೆಲಸ ಕೊಟ್ಟರೆ ಸಾಲದು, ಮೆದುಳಿಗೆ ಕೆಲಸ ಕೊಡಬೇಕು. ಬುದ್ಧಿವಂತಿಕೆಯಿಂದ ಯೋಚಿಸಬೇಕು. ಹಾಗಾದಾಗ ಮಾತ್ರ ಫೋಟೋದಲ್ಲಿರುವ ಇನ್ನೊಂದು ಕುದರೆಯನ್ನು ಪತ್ತೆಹಚ್ಚಬಹುದು. ನಿಮಗೆ 10 ಸೆಕೆಂಡ್ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಫೋಟೋದಲ್ಲಿರುವ ಇನ್ನೊಂದು ಕುದರೆಯನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.
10 ಸೆಕೆಂಡ್ ಸಮಯದಲ್ಲಿ ನೀವು ಫೋಟೋದಲ್ಲಿರುವ ಇನ್ನೊಂದು ಕುದುರೆಯನ್ನು ಪತ್ತೆಹಚ್ಚಿದ್ದರೆ, ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ನಿಮ್ಮ ಬುದ್ಧಿಮತ್ತೆಗೆ ನೀವೇ ಸರಿಸಾಟಿ. ಅಲ್ಲದೆ, ನಿಮ್ಮಂತಹ ಜೀನಿಯಸ್ ಯಾರೂ ಇಲ್ಲ ಎಂದು ಭಾವಿಸಿ. ಒಂದು ವೇಳೆ ನಿಮ್ಮಿಂದ ಇನ್ನೊಂದು ಕುದುರೆಯನ್ನು ಪತ್ತೆಹಚ್ಚಲಾಗದೇ ಎಲ್ಲಿದೆ ಅಂತಾ ಹುಡುಕಾಡಲು ಕಷ್ಟಪಡುತ್ತಿದ್ದರೆ, ಚಿಂತಿಸಬೇಡಿ ನಿಮಗಾಗಿ ನಮ್ಮ ಉತ್ತರ ಇಲ್ಲಿದೆ. ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್)