ನ್ಯೂಸ್

ರಾಜ್ಯದಲ್ಲಿ ಮುಂಗಾರು ಮಳೆಯ ಮುನ್ಸೂಚನೆ; ಹವಾಮಾನ ಇಲಾಖೆ ವರದಿ ಹೀಗಿದೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸಲಿದ್ದು, ಮುಂದಿನ 5 ದಿನ ರಾಜ್ಯಾದ್ಯಂತ ಭಾರಿ ಮಳೆಯ(Heavy Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ(Weather Forecast) ವರದಿಯಲ್ಲಿ ಉಲ್ಲೇಖಿಸಿದೆ.

ಇಂದು ಮತ್ತು ನಾಳೆ ಕರಾವಳಿಗೆ ಆರೆಂಜ್ ಅಲರ್ಟ್(Orange Alert) ಸೂಚನೆಯನ್ನು ನೀಡಿದ್ದು, ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕೊನೆಯ ಮೂರು ದಿನ ಯಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಿದ್ದು. ದಕ್ಷಿಣ, ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.