ಲಖನೌ: ಪಾಕಿಸ್ತಾನದ ಪ್ರತಿಯೊಂದು ಪ್ರದೇಶಕ್ಕೂ ಬ್ರಹ್ಮೋಸ್ (BrahMos) ಕ್ಷಿಪಣಿಳು ತಲುಪುತ್ತವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ (ಅಕ್ಟೋಬರ್,18) ಪಾಕ್ಗೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಆಪರೇಷನ್ ಸಿಂಧೂರವನ್ನು ಶ್ಲಾಘಿಸಿದ್ದಾರೆ.
ಈ ಬಗ್ಗೆ ಉತ್ತರ ಪ್ರದೇಶದ ಲಖನೌದಲ್ಲಿರುವ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಾದ ಬ್ರಹ್ಮೋಸ್ ಕ್ಷಿಪಣಿಗಳ ಮೊದಲ ಬ್ಯಾಚ್‌ಗೆ ಹಸಿರು ನಿಶಾನೆ ತೋರಿಸಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವ, ಭಾರತೀಯ ಸಶಸ್ತ್ರ ಪಡೆಗಳ ಆಪರೇಷನ್ ಸಿಂಧೂರದ ಯಶಸ್ಸಿಗೆ ಶ್ಲಾಘಿಸಿದ್ದಾರೆ. ಆದರೆ ಇದು ಕೇವಲ ಟ್ರೇಲರ್ ಮಾತ್ರ ಎಂದು ಪಾಕ್ಗೆ ಎಚ್ಚರಿಕೆ ನೀಡಿದ್ದಾರೆ. ಬ್ರಹ್ಮೋಸ್ ಕ್ಷಿಪಣಿ ವ್ಯವಸ್ಥೆಯು ಆಪರೇಷನ್ ಸಿಂಧೂರದ ಸಮಯದಲ್ಲಿ ಭಾರತ ತನ್ನ ಶತ್ರುಗಳನ್ನು ಬಿಡುವುದಿಲ್ಲ ಎಂಬುದನ್ನು ಸಾಬೀತುಪಡಿಸಿತು ಎಂದು ಸಿಂಗ್ ಹೇಳಿದ್ದಾರೆ.
ಇದನ್ನೂ ಓದಿ: ಕೊಟ್ಟಿರೋ ಮಾತಿಗೆ ತಪ್ಪಲ್ಲ! ತಪ್ಪಾಗಿ ಆಡಿರುವ ಮಾತಿಗೆ…. ಫಿನಾಲೆ ವೇದಿಕೆಯಲ್ಲಿ ಕಿಚ್ಚನ ಕಿಚ್ಚಿನ ಮಾತು | BBK12
ಮುಂದುವರೆದು ಮಾತನಾಡಿದ ಸಿಂಗ್, ಆಪರೇಷನ್ ಸಿಂಧೂರದ ಗೆಲುವು ಇನ್ನು ಮುಂದೆ ಒಂದು ಸಣ್ಣ ಘಟನೆಯಲ್ಲ ಎಂದು ಸಾಬೀತುಪಡಿಸಿದೆ. ಅಲ್ಲದೆ, ಗೆಲುವು ನಮ್ಮ ಅಭ್ಯಾಸವಾಗಿದೆ. ನಮ್ಮ ವಿರೋಧಿಗಳು ಇನ್ನು ಮುಂದೆ ಬ್ರಹ್ಮೋಸ್‌ನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ದೇಶವು ವಿಶ್ವಾಸ ಹೊಂದಿದೆ. ಪಾಕಿಸ್ತಾನದ ಪ್ರತಿಯೊಂದು ಭೂಪ್ರದೇಶವೂ ಈಗ ನಮ್ಮ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ ಎಂದು ಪಾಕ್ಗೆ ಎಚ್ಚರಿಕೆ ನೀಡಿದ್ದಾರೆ.
ಬ್ರಹ್ಮೋಸ್ ಕೇವಲ ಕ್ಷಿಪಣಿಯಲ್ಲ, ಬದಲಾಗಿ ಭಾರತದ ಬೆಳೆಯುತ್ತಿರುವ ಆತ್ಮನಿರ್ಭರ ಭಾರತದ ಸಾಮರ್ಥ್ಯಗಳ ಸಂಕೇತವಾಗಿದೆ. ನಮ್ಮ ವೇಗ, ನಿಖರತೆ ಮತ್ತು ಶಕ್ತಿಯ ಈ ಸಂಯೋಜನೆಯು ಬ್ರಹ್ಮೋಸ್ ಅನ್ನು ವಿಶ್ವದ ಅತ್ಯುತ್ತಮ ಕ್ಷಿಪಣಿಗಳಲ್ಲಿ ಒಂದನ್ನಾಗಿ ಮಾಡುತ್ತದೆ. ಬ್ರಹ್ಮೋಸ್ ಭಾರತೀಯ ಸಶಸ್ತ್ರ ಪಡೆಗಳ ಬೆನ್ನೆಲುಬಾಗಿ ಮಾರ್ಪಟ್ಟಿದೆ ಎಂದು ಸಿಂಗ್ ಭರವಸೆ ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮುನ್ನ, ಇಬ್ಬರು ನಾಯಕರು ಲಕ್ನೋದ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಾದ ಬ್ರಹ್ಮೋಸ್ ಕ್ಷಿಪಣಿಗಳ ಮೊದಲ ಬ್ಯಾಚ್‌ಗೆ ಚಾಲನೆ ನೀಡಿದರು. ಅಧಿಕೃತ ಹೇಳಿಕೆಯಲ್ಲಿ, ಸರ್ಕಾರವು ಇದು ಉತ್ತರ ಪ್ರದೇಶ ರಕ್ಷಣಾ ಕೈಗಾರಿಕಾ ಕಾರಿಡಾರ್ (ಯುಪಿಡಿಐಸಿ) ಗೆ ಒಂದು ಮೈಲಿಗಲ್ಲು ಮಾತ್ರವಲ್ಲದೆ ರಕ್ಷಣಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಭಾರತದ ಸಂಕಲ್ಪಕ್ಕೆ ಹೊಸ ಶಕ್ತಿಯನ್ನು ನೀಡುತ್ತದೆ ಎಂದು ಹೇಳಿದೆ. (ಏಜೆನ್ಸೀಸ್)