ನ್ಯೂಸ್

ಅನುಭವದ ಮೇಲೆ ತೀರ್ಮಾನ; EVM ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ನಮ್ಮ ಉದ್ದೇಶ: CM

ಬೆಂಗಳೂರು: EVM ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮ ಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದರು. ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ ಎಂದೂ ಸಿಎಂ ತಿಳಿಸಿದರು.

ಧರ್ಮಸ್ಥಳ ಪ್ರಕರಣವನ್ನು NIA ಗೆ ವಹಿಸಬೇಕೆಂದು ಸ್ವಾಮೀಜಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಿದ್ದು ಅವರೂ ಪೊಲೀಸರೇ ಅಲ್ವಾ ಎಂದರು.