ನ್ಯೂಸ್

ಇಂದು 5861 ಹೊಸ ಕರೊನಾ ಕೇಸ್​​ಗಳು ಪತ್ತೆ; 8000ಕ್ಕೂ ಹೆಚ್ಚು ಮಂದಿ ಆಸ್ಪತ್ರೆಯಿಂದ ಡಿಸ್​ಚಾರ್ಜ್​​

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 8061 ಜನ ಕರೊನಾದಿಂದ ಚೇತರಿಸಿಕೊಂಡು, ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ. ಅಲ್ಲಿಗೆ ಒಟ್ಟು 1,97,625 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಸಕ್ರಿಯ ಕರೊನಾ ಪ್ರಕರಣಗಳು 81,211 ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇಂದು 5851 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2, 83,665ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ 130 ಸೋಂಕಿತರು ಸಾವನ್ನಪ್ಪಿದ್ದು, ಕರೊನಾದಿಂದ ಮೃತಪಟ್ಟವರು ಒಟ್ಟು 4810 ಜನರು. ಹಾಗೇ 768 ಸೋಂಕಿತರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.