ನ್ಯೂಸ್

ಪಹಲ್ಗಾಮ್ ರಕ್ತಪಾತ; ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರ ರಕ್ಷಣೆಗೆ ಧಾವಿಸಿದ ರಾಜ್ಯ ಸರ್ಕಾರ |terror attack

terror attack| ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದನೀಯ ಸಂಗತಿಯಾಗಿದೆ. ಆದ್ದರಿಂದ ಜಮ್ಮು ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿತರಲು ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ.

ರಾಜ್ಯ ಸರ್ಕಾರ ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ಪ್ರವಾಸಿಗರ ಸಂಬಂಧಿಕರು, ಪರಿಚಯಸ್ಥರು ಅಥವಾ ಟೂ‌ರ್ ಏಜೆನ್ಸಿಯವರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ನೀಡಲು ತಕ್ಷಣವೇ ಈ ಸಂಖ್ಯೆಗಳಿಗೆ ಕರೆ ಮಾಡುವಂತೆ ಸೂಚಿಸಲಾಗಿದೆ.

ಸಹಾಯವಾಣಿ ಸಂಖ್ಯೆ :

080-43344334

080-43344335

080-43344336

080-43344342

ಕಾಶ್ಮೀರದ ಪಹಲ್​ಗಾಮ್​​ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರಿಂದ ಗುಂಡಿನ ದಾಳಿ ನಡೆದಿದ್ದು, ಕರ್ನಾಟಕದ ಅನೇಕ ಪ್ರವಾಸಿಗರು ಅಲ್ಲಿ ಸಿಲುಕಿದ್ದಾರೆ. ಅವರನ್ನು ಕರೆತರಲು ಕರ್ನಾಟಕ ಸರ್ಕಾರ ಇದೀಗ ಕರ್ನಾಟಕ ಸರ್ಕಾರ ಸಹಾಯವಾಣಿ ಸಂಖ್ಯೆಗಳನ್ನು ಆರಂಭಿಸಿದೆ. ರಾಜ್ಯದ ಪ್ರವಾಸಿಗರ ಸಂಬಂಧಿಕರು, ಕುಟುಂಬಸ್ಥರು ಈ ಸಂಖ್ಯೆಗಳಿಗೆ ಕರೆ ಮಾಡುವ ಮೂಲಕ ಸಹಾಯ ಪಡೆಯಬಹುದು ಎಂದು ಸರ್ಕಾರ ತಿಳಿಸಿದೆ.

(ಏಜೆನ್ಸೀಸ್)