Pahalgam Terror Attack: ಇಂದು (ಏ.22) ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಭೀಕರ ಗುಂಡಿನ ದಾಳಿಗೆ ಕನ್ನಡಿಗರು ಸೇರಿದಂತೆ ವಿದೇಶಿ ಪ್ರವಾಸಿಗರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗುಂಡಿನ ದಾಳಿಗೆ ಬಲಿಯಾದವರ ಪೈಕಿ ಕರ್ನಾಟಕದ ಶಿವಮೊಗ್ಗದ ವಿಜಯನಗರ ನಿವಾಸಿ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಮತ್ತು ಹಾವೇರಿ ಮೂಲದ ಭರತ್ ಭೂಷಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ‘ಇವನ ಮುಖ ನೋಡಲು ಹಣ ಕೊಟ್ಟು ಚಿತ್ರಮಂದಿರಕ್ಕೆ ಹೋಗ್ಬೇಕಾ’? ಈ ಚುಚ್ಚು ಮಾತು ಕೇಳಿದ್ದ ನಟ ಇಂದು ಸೂಪರ್ಸ್ಟಾರ್ | Star Actor
ಕಳೆದ 30 ವರ್ಷಗಳಲ್ಲಿ ಇದು ಭೀಕರ ದಾಳಿ ಎನ್ನಲಾಗಿದ್ದು, ಉಗ್ರರ ಗುಂಡಿನ ದಾಳಿಗೆ ಮೃತಪಟ್ಟ ಪ್ರವಾಸಿಗರ ಸಂಖ್ಯೆ 28ಕ್ಕೇರಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸ್ಥಳಕ್ಕೆ ಸಿಆರ್ಪಿಎಫ್ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ತುರ್ತು ಚಿಕಿತ್ಸೆ ಕೊಡಿಸಿದ್ದಾರೆ.