ನ್ಯೂಸ್

ಪಹಲ್ಗಾಮ್ ಭಯೋತ್ಪಾದಕ ದಾಳಿ; ವಾಯುಪಡೆಯ ಮುಖ್ಯಸ್ಥರ ಜೊತೆ ಪ್ರಧಾನಿ ಮೋದಿ ಚರ್ಚೆ| Modi

ಸುದೀಪ್​ ವಿ.ಎನ್​

Air Chief Marshal | ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಘೋರ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (04) ಭಾರತೀಯ ವಾಯುಪಡೆಯ ಮುಖ್ಯಸ್ಥ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಒಟ್ಟಿಗೆ ಮಾತುಕತೆ ನಡೆಸಿದರು.

ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ, ವಾಯುಪಡೆಯ ಮುಖ್ಯಸ್ಥರು ಮತ್ತು ಪ್ರಧಾನಿ ಮೋದಿ ಒಟ್ಟಿಗೆ ಈ ಸಭೆ ನಡೆಯಿತು. ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಮತ್ತು ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರು ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಭಾಗಿಯಾಗಿದ್ದರು.

ಪಹಲ್ಗಾಮ್ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತವು ಹೆಚ್ಚಿದ ಭದ್ರತಾ ನಿಲುವಿನ ಹಿನ್ನೆಲೆಯಲ್ಲಿ ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರೊಂದಿಗಿನ ಸತತ ಸಭೆಗಳು ನಡೆಯುತ್ತಿವೆ. ಭಾರತೀಯ ನೌಕಾಪಡೆಯು ಅರೇಬಿಯನ್ ಸಮುದ್ರದಲ್ಲಿ ವ್ಯಾಪಕವಾದ ಕವಾಯತುಗಳನ್ನು ನಡೆಸುತ್ತಿದೆ ಮತ್ತು ವಾಣಿಜ್ಯ ಹಡಗುಗಳು ಕೆಲವು ವಲಯಗಳನ್ನು ತಪ್ಪಿಸುವಂತೆ ಎಚ್ಚರಿಕೆಯನ್ನು ನೀಡಿದೆ.

(ಏಜೆನ್ಸೀಸ್)

ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು ಮಿಲಿಟರಿ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂಬ ಊಹಾಪೋಹಗಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನವು ಪರಮಾಣು ಪ್ರತೀಕಾರ ಸೇರಿದಂತೆ ಹಲವಾರು ಪ್ರಚೋದನಕಾರಿ ಬೆದರಿಕೆಗಳನ್ನು ಹೊರಡಿಸಿದೆ. ಈ ನಡುವೆ ಗಡಿಯಾಚೆಗಿನ ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವ ಪಾಕಿಸ್ತಾನಕ್ಕೆ ಬಲವಾದ ಸಂದೇಶ ರವಾನಿಸಲು ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ.

ನೌಕಾಪಡೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತದ ರಾಷ್ಟ್ರೀಯ ಹೈಡ್ರೋಗ್ರಾಫಿಕ್ ಕಚೇರಿಯು ಈ ಎಚ್ಚರಿಕೆಯನ್ನು ಹೊರಡಿಸಿದ್ದು, ಭಾರತ ಮತ್ತು ಪಾಕಿಸ್ತಾನದ ಎರಡೂ ನೌಕಾಪಡೆಗಳು ಹೆಚ್ಚಿನ ಎಚ್ಚರಿಕೆಯಲ್ಲಿ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಇದನ್ನು ಹೇಳಲಾಗಿದೆ.