ನ್ಯೂಸ್

ಆರ್ಥಿಕತೆ, ಅಭಿವೃದ್ಧಿಯ ವಿಷಯದಲ್ಲಿ ಭಾರತವನ್ನು ಸೋಲಿಸದಿದ್ದರೆ ನನ್ನ ಹೆಸರು ಬದಲಾಯಿಸುತ್ತೇನೆ; ಪಾಕ್ ಪ್ರಧಾನಿಯ ಹೇಳಿಕೆ ವೈರಲ್​

ನವದೆಹಲಿ: ಆರ್ಥಿಕ ಬಿಕ್ಕಟ್ಟು, ಉಗ್ರವಾದದಿಂದಾಗಿ ಕಂಗೆಟ್ಟು ಸಾಲದ ಹೊರೆ ಹೊತ್ತಿರುವ ಪಾಕಿಸ್ತಾನ ಬುದ್ಧಿ ಕಲಿಯದೆ ಭಾರತದ ವಿರುದ್ಧ ತನ್ನ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸುವಂತೆ ಕಾಣುತ್ತಿಲ್ಲ. ಇದೀಗ ಆರ್ಥಿಕತೆ ಮತ್ತು ಅಭಿವೃದ್ಧಿಯ ವಿಷಯದಲ್ಲಿ ಪಾಕಿಸ್ತಾನವು ಭಾರತವನ್ನು ಸೋಲಿಸದಿದ್ದರೆ ನನ್ನ ಹೆಸರನ್ನು ಬದಲಾಯಿಸಿಕೊಳ್ಳುತ್ತೇನೆ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್​ ( Pak PM Shehbaz Sharif) ಹೇಳಿದ್ದಾರೆ. 

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿರುವ ಡೇರಾ ಘಾಜಿ ಖಾನ್‌ಗೆ ಡೇರಾ ಘಾಜಿ ಖಾನ್‌ಗೆ ಭೇಟಿ ನೀಡಿ ಮಾತನಾಡಿದಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್​ ( Pak PM Shehbaz Sharif)​ ಅಭಿವೃದ್ಧಿ ಹಾಗೂ ಆರ್ಥಿಕತೆಯ ವಿಚಾರದಲ್ಲಿ ಭಾರತವನ್ನು ಹಿಂದಿಕ್ಕುವುದಾಗಿ ವಾಗ್ದಾನ ಮಾಡಿದ್ದಾರೆ. 

ನಮ್ಮ ಸರ್ಕಾರ ಸಾಮಾನ್ಯ ಜನರ ಅಗತ್ಯಗಳನ್ನು ಪೂರೈಸಲು ಶ್ರಮಿಸುತ್ತಿದೆ. ಪಾಕಿಸ್ತಾನದ ಪರಿಸ್ಥಿತಿ ಸುಧಾರಿಸಲು ನಾವು ಹಗಲಿರುಳು ಕೆಲಸ ಮಾಡುತ್ತೇವೆ. ಸರ್ವಶಕ್ತನು ಯಾವಾಗಲೂ ಪಾಕಿಸ್ತಾನವನ್ನು ಆಶೀರ್ವದಿಸಿದ್ದಾನೆ. ಅಭಿವೃದ್ಧಿ ಮತ್ತು ಪ್ರಗತಿಯ ವಿಷಯದಲ್ಲಿ ಪಾಕಿಸ್ತಾನ ಭಾರತವನ್ನು ಸೋಲಿಸದಿದ್ದರೆ ನನ್ನ ಹೆಸರನ್ನೇ ಬದಲಾಯಿಸುತ್ತೇನೆ.

ನಾನು ನವಾಜ್ ಷರೀಫ್ ಅವರ ಅಭಿಮಾನಿ. ಅವರ ಅನುಯಾಯಿ. ಇಂದು ಅವರ ಮೇಲೆ ಪ್ರಮಾಣ ಮಾಡುತ್ತೇನೆ. ನನಗೆ ಶಕ್ತಿ ಮತ್ತು ಇಚ್ಛಾಶಕ್ತಿ ಇರುವವರೆಗೂ, ನಾವೆಲ್ಲರೂ ಒಟ್ಟಾಗಿ ಪಾಕಿಸ್ತಾನವನ್ನು ಶ್ರೇಷ್ಠತೆಯತ್ತ ಕೊಂಡೊಯ್ಯಲು ಮತ್ತು ಭಾರತವನ್ನು ಸೋಲಿಸಲು ಕೆಲಸ ಮಾಡುತ್ತೇವೆ ಎಂದು ತಮ್ಮ ಹಿರಿಯ ಸಹೋದರ ಮತ್ತು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಮೇಲೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್​ ( Pak PM Shehbaz Sharif) ಪ್ರಮಾಣ ಮಾಡಿದ್ದಾರೆ. 

ಪಾಕ್ ಪ್ರಧಾನಿಗಳ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರವಾಗಿ ಟ್ರೋಲ್ ಮಾಡಲಾಗುತ್ತಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ಹೊರಬಿದ್ದಿದ್ದಕ್ಕೆ ಪ್ರಧಾನಿಗಳು ಈ ರೀತಿಯ ಹೇಳಿಕೆಯನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಭಾರತದ ಬಗ್ಗೆ ಹೇಳಿಕೆ ಕೊಡುವ 15 ದಿನಕ್ಕೂ ಮುನ್ನ ಪ್ರಧಾನಿಗಳು ನೆರೆಯ ರಾಷ್ಟ್ರದೊಂದಿಗೆ ಶಾಂತಿ ಮತುಕತೆ ನಡೆಸಿದ್ದರು. ಇದೀಗ ಅವರು ನೀಡಿರುವ ಹೇಳಿಕೆ ನೋಡಿದರೆ ಅವರ ದ್ವಿಮುಖವನ್ನು ಎತ್ತಿ ತೋರಿಸುತ್ತಿದೆ ಎಂದು ನೆಟ್ಟಿಗರು ಕಮೆಂಟ್ ಹಾಕಿ ವಾಗ್ದಾಳಿ ನಡೆಸಿದ್ದಾರೆ.