ನ್ಯೂಸ್

ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಪಾಕ್​ ಪ್ರಧಾನಿ ಶೆಹಬಾಜ್​

ಇಸ್ಲಮಾಬಾದ್​: ಬಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್​ ಷರೀಫ್​ ಧನ್ಯವಾದ ತಿಳಿಸಿದ್ದಾರೆ.

ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಶೆಹಬಾಜ್​​ ಷರೀಫ್​ಗೆ ಟ್ವೀಟ್​ ಮೂಲಕ ಪ್ರಧಾನಿ ಮೋದಿ ಶುಭಕೋರಿದ್ದರು. ಇಂದು ಟ್ವೀಟ್​ ಮೂಲಕವೇ ಮೋದಿಗೆ ಧನ್ಯವಾದ ತಿಳಿಸಿದ್ದಾರೆ.

ಪಾಕಿಸ್ತಾನವು ಭಾರತದೊಂದಿಗೆ ಶಾಂತಿಯುತ ಮತ್ತು ಸಹಕಾರ ಸಂಬಂಧವನ್ನು ಬಯಸುತ್ತದೆ. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಬಾಕಿ ಉಳಿದಿರುವ ವಿವಾದಗಳ ಬಗ್ಗೆಯೂ ಶಾಂತಿಯುತ ಇತ್ಯರ್ಥ ಅನಿವಾರ್ಯವಾಗಿದೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನದ ತ್ಯಾಗಗಳು ಎಲ್ಲರಿಗೂ ತಿಳಿದಿವೆ. ಶಾಂತಿಯನ್ನು ಕಾಪಾಡೋಣ ಎಂದು ಟ್ವೀಟ್​ ಮಾಡಿದ್ದಾರೆ.