ನ್ಯೂಸ್

ಅಮೆರಿಕಾ ಅಧ್ಯಕ್ಷ ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ ಎಂದ ಪಾಕ್​ಗೆ ಎಚ್ಚರಿಕೆ ನೀಡಿದ ಟ್ರಂಪ್!​ | Pakistan

Pakistan: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಪಾಕಿಸ್ತಾನಕ್ಕೆ ಮುಂದಿನ ದಿನಗಳಲ್ಲಿ ಭೇಟಿ ನೀಡಲಿದ್ದಾರೆ ಎಂದು ಪಾಕ್​ ಮಾಧ್ಯಮ ಸಂಸ್ಥೆ 'ದಿ ಡಾನ್' ಪತ್ರಿಕೆ ವರದಿ ಮಾಡಿದ ಬೆನ್ನಲ್ಲೆ ಅಮೆರಿಕ ವೈಟ್​ ಹೌಸ್ ಅಧಿಕಾರಿಗಳು ಪಾಕ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನ ಭೇಟಿ ನೀಡುವ ಬಗ್ಗೆ ನಮಗೆ ಯಾವುದೇ ವೇಳಾಪಟ್ಟಿ ಇಲ್ಲ. ಅಲ್ಲದೆ, ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಟ್ರಂಪ್​​ ಸ್ಪಷ್ಟಪಡಿಸಿದ್ದಾರೆ ಎಂದು ಶ್ವೇತಭವದ ಅಧಿಕಾರಿಗಳು ತಿಳಿಸಿದ್ದಾರೆ.

ಸುಳ್ಳು ವರದಿ ಬಗ್ಗೆ ಎಚ್ಚರಿಕೆ ನೀಡಿದ ಅಮೆರಿಕ

ಆದಾಗ್ಯೂ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ಲಾಮಾಬಾದ್‌ಗೆ ಬರುತ್ತಿದ್ದಾರೆ ಎಂಬ ಪಾಕಿಸ್ತಾನಿ ಮಾಧ್ಯಮ ವರದಿಗಳಿಗೆ ಶ್ವೇತಭವನದ ಅಧಿಕಾರಿಗಳು ಇತ್ತೀಚೆಗೆ ಪ್ರತಿಕ್ರಿಯಿಸಿದ್ದಾರೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನಕ್ಕೆ ಹೋಗುತ್ತಿಲ್ಲ. ಅವರ ಪಾಕಿಸ್ತಾನ ಭೇಟಿಗೆ ಯಾವುದೇ ವೇಳಾಪಟ್ಟಿ ಇಲ್ಲ. ಟ್ರಂಪ್ ಜುಲೈ 18 ರಂದು ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿಲ್ಲ. ಮಾಧ್ಯಮಗಳು ಈ ವರದಿಗಳನ್ನು ಸುಳ್ಳು ಎಂದು ನಿರಾಕರಿಸಿವೆ. ಅದೇ ಸಮಯದಲ್ಲಿ, ಪಾಕಿಸ್ತಾನಿ ಮಾಧ್ಯಮಗಳು ಸುಳ್ಳು ವರದಿಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿವೆ. ಅಂತಹ ಸುಳ್ಳು ಹೇಳಿಕೆಗಳನ್ನು ನೀಡದಂತೆ ಅದು ಎಚ್ಚರಿಕೆ ನೀಡಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಟ್ರಂಪ್ ಪಾಕಿಸ್ತಾನಕ್ಕೆ ಭೇಟಿ ನೀಡುವ ಸುದ್ದಿ ಚರ್ಚೆಯ ವಿಷಯವಾಗಿದೆ. ಪಾಕಿಸ್ತಾನಿ ಮಾಧ್ಯಮಗಳು ಟ್ರಂಪ್ ಭೇಟಿಯನ್ನು ಉತ್ಸಾಹದಿಂದ ಬಣ್ಣಿಸಿವೆ. ಏಷ್ಯಾದ ದೇಶಗಳ ಪ್ರವಾಸದ ಭಾಗವಾಗಿ ಅವರು ಮೊದಲು ಪಾಕಿಸ್ತಾನಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಡಾನ್ ಬಹಿರಂಗಪಡಿಸಿದೆ. ಆ ನಂತರವೇ ಅವರು ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಸೆಪ್ಟೆಂಬರ್‌ನಲ್ಲಿ ಭಾರತ ಕ್ವಾಡ್ ಶೃಂಗಸಭೆಯನ್ನು ಆಯೋಜಿಸಲಿದೆ ಎಂದು ತಿಳಿದಿದೆ. ಅದರಲ್ಲಿ ಭಾಗವಹಿಸಲು ಟ್ರಂಪ್ ಭಾರತಕ್ಕೆ ಬರುತ್ತಾರೆ ಎಂದು ಹೇಳಲಾಗುತ್ತಿದೆ.(ಏಜೆನ್ಸೀಸ್​)