ನ್ಯೂಸ್

'ಪಾಕಿಸ್ತಾನ ತನ್ನ ಶಸ್ತ್ರಾಸ್ತ್ರವನ್ನು ಕೆಳಗಿಡಬೇಕು': ಜಮ್ಮು-ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಹೇಳಿಕೆ| Operation Sindoor

Omar Abdullah: ಜಮ್ಮು-ಕಾಶ್ಮೀರದ ಪಹಲ್ಗಾಮ್​​ನಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯೂ ಪಾಕಿಸ್ತಾನ ಮತ್ತು ಪಾಕ್​ ಆಕ್ರಮಿತ ಪ್ರದೇಶಗಳಲ್ಲಿನ ಭಯೋತ್ಪಾದಕ ನೆಲೆಯ ಮೇಲೆ ಇಂದು (ಬುಧವಾರ, ಮೇ.7) ಕ್ಷಿಪಣಿ ದಾಳಿ ನಡೆಸಿದೆ. ಭಾರತದ ದಾಳಿಗೆ 80ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ.

ಭಾರತೀಯ ಸೇನೆಯ ಈ ಮಿಂಚಿನ ದಾಳಿಗೆ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಪ್ರತಿಕ್ರಿಯಿಸಿದ್ದು, 'ನಮ್ಮ ನೆರೆಯ ದೇಶ (ಪಾಕಿಸ್ತಾನ) ತನ್ನ ಶಸ್ತ್ರಾಸ್ತ್ರವನ್ನು ಕೆಳಗಿಡಬೇಕು' ಎಂದು ಒಮರ್ ಎಂದು ಹೇಳಿದ್ದಾರೆ.

'ನಮ್ಮಲ್ಲಿ ಯಾರೂ ಯುದ್ಧವನ್ನು ಬಯಸುವುದಿಲ್ಲ. ಎರಡು ದೇಶಗಳ ನಡುವಿನ ಬಿಕ್ಕಟ್ಟು ಸುಧಾರಿಸಬೇಕು. ಪರಿಸ್ಥಿತಿ ತಿಳಿಯಾಗಬೇಕೆಂದು ನಾವು ಬಯಸುತ್ತೇವೆ' ಎಂದು ಒಮರ್ ಅಬ್ದುಲ್ಲಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

26 ಭಾರತೀಯ ಪ್ರವಾಸಿಗರ ಪ್ರಾಣವನ್ನು ಬಲಿತೆಗೆದುಕೊಂಡ ಉಗ್ರರರನ್ನು ಮಟ್ಟಹಾಕಲು ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ಮೂಲಕ ದಿಟ್ಟ ಹೆಜ್ಜೆ ಇಟ್ಟಿದೆ. (ಏಜೆನ್ಸೀಸ್​)