ನ್ಯೂಸ್

ಹೋಳಿಗೆ ಸೇವಿಸುವ ಮೂಲಕ ಪಂಚಮಸಾಲಿ ಧರಣಿ ಅಂತ್ಯ

arunakunigal

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ರಾಜ್ಯದ 2ಎ ಮೀಸಲಾತಿ ಪಟ್ಟಿಗೆ ಸೇರ್ಪಡೆ ಮಾಡಬೇಕೆಂದು 64 ದಿನದಿಂದ ನಡೆಯುತ್ತಿದ್ದ ಧರಣಿಯನ್ನು ಹಿಂಪಡೆಯಲಾಗಿದೆ.

ಮುಂದಿನ ಆರೇಳು ತಿಂಗಳಲ್ಲಿ ವರದಿ ತರಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಸದನದಲ್ಲಿ ಭರವಸೆ ನೀಡಿದರು.

ಈ ವಿಚಾರವನ್ನು ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸುತ್ತಿದ್ದ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಸಚಿವ ಸಿಸಿ ಪಾಟೀಲ್, ಶಾಸಕರಾದ ಬಸವರಾಜ ಪಾಟೀಲ್ ಯತ್ನಾಳ್, ರೇಣುಕಾಚಾರ್ಯ, ಅರುಣ್ ಪೂಜಾರಿ ಸೇರಿ ಅನೇಕರು ಭೇಟಿ ಮಾಡಿದರು. ಧರಣಿ ಸತ್ಯಾಗ್ರಹವನ್ನು ಕೈಬಿಡಿ ಎಂದು ಸ್ವಾಮೀಜಿಯವರಿಗೆ ಮನವಿ ಮಾಡಿದರು.

ನಂತರ ಹೋಳಿಗೆ ತಿನ್ನಿಸುವ ಮೂಲಕ ಧರಣಿಯನ್ನು ಅಂತ್ಯಗೊಳಿಸಲಾಯಿತು. ಆರು ತಿಂಗಳವರೆಗೆ ಕಾದುನೋಡುವ, ನಂತರ ಮುಂದಿನ ನಿರ್ಧಾರ ಕೈಗೊಳ್ಳುವ ತೀರ್ಮಾನ ಮಾಡಲಾಯಿತು.