ನ್ಯೂಸ್

VIDEO| ಮಗನಿಗೆ ಶಿಕ್ಷೆ ನೀಡಿದ ಎಂಬ ಕಾರಣಕ್ಕೆ ಶಿಕ್ಷಕನನ್ನು ಅಮಾನುಷವಾಗಿ ಥಳಿಸಿದ ಪಾಲಕರು

ಕಾನ್ಪುರ: ತನ್ನ ಮಗನಿಗೆ ಶಿಕ್ಷೆ ನೀಡಿದರೆಂಬ ಕಾರಣಕ್ಕೆ ವ್ಯಕ್ತಿಯೋರ್ವ ಗುಂಪು ಕಟ್ಟಿಕೊಂಡು ಶಿಕ್ಷಕನನ್ನು ಅಮಾನುಷವಾಗಿ ಥಳಿಸಿರುವ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇತ್ತ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು, ಖಾಸಗಿ ಶಾಲೆಯ ಶಿಕ್ಷಕನೋರ್ವ ತಾನು ಹೇಳಿದ ಮಾತು ಕೇಳಲಿಲ್ಲ ಎಂಬ ಕಾರಣಕ್ಕೆ 50ಕ್ಕೂ ಹೆಚ್ಚು ಬಸ್ಕಿ ಹೊಡೆಸಿದ್ದಾರೆ. ಬಸ್ಕಿ ಹೊಡೆದ ನಂತರ ಬಾಲಕ ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಆತನ ಕಾಲು ಊದಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಗನಿಗೆ ಶಿಕ್ಷಕ ಶಿಕ್ಷೆ ನೀಡಿದ ವಿಚಾರ ತಿಳಿದ ಪೋಷಕರು ತಮ್ಮ ನೆರೆ-ಹೊರೆಯವರು ಹಾಗೂ ಸ್ನೇಹಿತರ ಜೊತೆಗೂಡಿ ಶಾಲೆಗೆ ನುಗ್ಗಿದ್ದು, ಶಿಕ್ಷಕನನ್ನು ಥಳಿಸಿದ್ದಾರೆ. ಕೂಡಲೇ ಶಾಲಾ ಆಡಳಿತ ಮಂಡಳಿಯವರು ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದು, ನಮ್ಮ ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ಹತ್ತೋಟಿಗೆ ತಂದಿದ್ದಾರೆ. ಘಟನೆ ಸಂಬಂಧ FIR ದಾಖಲಾಗಿದ್ದು, ಹಲ್ಲೆ ಮಾಡಿದ ವ್ಯಕ್ತಿಗಳು ತಲೆಮಾರಿಸಿಕೊಂಡಿದ್ದಾರೆ. ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.