ರಾಣೆಬೆನ್ನೂರ: ಪತಂಜಲಿ ಯೋಗಪೀಠ ಹಾಗೂ ಕೆಎಲ್ಇ ಅಂಗ ಸಂಸ್ಥೆಗಳ ಸಹಯೋಗದಲ್ಲಿ ಜೂ. 21ರಂದು ಬೆಳಗ್ಗೆ 5.30ಕ್ಕೆ ನಗರದ ರಾಜ ರಾಜೇಶ್ವರಿ ಮಹಿಳಾ ಕಾಲೇಜ್ ಆವರಣದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಪತಂಜಲಿ ಯೋಗ ಸಮಿತಿ ಜಿಲ್ಲಾಧ್ಯಕ್ಷ ರವಿ ಬಿಜಾಪುರ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಮಹಿಳಾ ಸಬಲೀಕರಣಕ್ಕಾಗಿ ಯೋಗ ಎಂಬ ಧ್ಯೇಯವಾಕ್ಯದೊಂದಿದೆ ಯೋಗ ದಿನ ಆಚರಿಸಲಾಗುತ್ತಿದೆ. ಜಿಲ್ಲಾ ಪತಂಜಲಿ ಯೋಗ ಸಮಿತಿ, ಭಾರತ ಸ್ವಾಭಿಮಾನ ಟ್ರಸ್ಟ್, ಮಹಿಳಾ ಪತಂಜಲಿ ಯೋಗ ಸಮಿತಿ, ಯುವ ಭಾರತ, ಕಿಸಾಸ್ ಸೇವಾ ಸಮಿತಿ ವತಿಯಿಂದ ಕಾರ್ಯಕ್ರಮ ಜರುಗಲಿದೆ.
ಸ್ಥಳೀಯ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಪ್ರಕಾಶಾನಂದಜಿ ಮಹಾರಾಜ್ ಸಾನ್ನಿಧ್ಯ ವಹಿಸುವರು. ಬ್ರಹ್ಮಕುಮಾರಿ ಈಶ್ವರೀ ವಿಶ್ವ ವಿದ್ಯಾಲಯದ ಸಂಚಾಲಕಿ ಮಾಲತಿಅಕ್ಕ, ತಹಸೀಲ್ದಾರ್ ಟಿ. ಸುರೇಶಕುಮಾರ, ಡಿವೈಎಸ್ಪಿ ಡಾ. ಗಿರೀಶ ಭೋಜಣ್ಣನವರ, ಕೆಎಲ್ಇ ಸ್ಥಾನಿಕ ಆಡಳಿತ ಮಂಡಳಿ ಚೇರ್ಮನ್ ವಿ.ಪಿ. ಲಿಂಗನಗೌಡ್ರ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಪ್ರಮುಖರಾದ ರಾಮಸಿಂಗ್ ರಾಠೋಡ, ಜ್ಯೋತಿ ಜಂಬಗಿ, ಕವಿತಾ ಕುಬಸದ, ಮಲ್ಲಿಕಾರ್ಜುನ ಮೊಟಳ್ಳಿ, ಆರ್.ಬಿ. ಪಾಟೀಲ, ಲಲಿತಾ ಮೇಲಗಿರಿ, ಮಹೇಶ್ವರಿ ಕುಬಸದ, ಕುಮಾರ ಜಂಬಗಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.