Peddi: ಗ್ಲೋಬಲ್ ಸ್ಟಾರ್, ತೆಲುಗು ನಟ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ 'ಪೆದ್ದಿ'. ರಾಷ್ಟ್ರ ಪ್ರಶಸ್ತಿ ವಿಜೇತ ಬುಚ್ಚಿ ಬಾಬು ಸನ ನಿರ್ದೇಶನದ ಈ ಚಿತ್ರದ ಫಸ್ಟ್ ಲುಕ್ ಈಗಾಗಲೇ ಭಾರೀ ಸದ್ದು ಮಾಡಿದೆ. ಇದೀಗ ಚಿತ್ರತಂಡ ರಾಮನವಮಿ ದಿನದಂದೇ ಸಿನಿಮಾದ ಫಸ್ಟ್ ಝಲಕ್ ರಿಲೀಸ್ ಮಾಡಿದ್ದು, ರಿಲೀಸ್ ದಿನಾಂಕವನ್ನೂ ಅಧಿಕೃತವಾಗಿ ಘೋಷಿಸಿದೆ.
ಪವರ್ ಫುಲ್ ಡೈಲಾಗ್ ಹೊಡೆಯುತ್ತಾ ಸಿಗರೇಟ್ ಬಾಯಲ್ಲಿ ಕಚ್ಚಿಕೊಂಡು ಭರ್ಜರಿ ಆಕ್ಷನ್ ಮಾಡುತ್ತಾ ರಗಡ್ ಲುಕ್ನಲ್ಲಿ ರಾಮ್ ಚರಣ್ ಎಂಟ್ರಿ ಕೊಟ್ಟಿದ್ದಾರೆ. ರಾಮ್ ಅಬ್ಬರಕ್ಕೆ ಫಿದಾ ಆಗಿರುವ ಫ್ಯಾನ್ಸ್ಗಳಿಗೆ 'ಪೆದ್ದಿ' ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ. ಚೆರ್ರಿ ಹುಟ್ಟುಹಬ್ಬದ ತಿಂಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಚಿತ್ರವು ಮುಂದಿನ ವರ್ಷದ ಮಾರ್ಚ್ 27ಕ್ಕೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ.
ರಾಮ್ ಚರಣ್ಗೆ ಜೋಡಿಯಾಗಿ ಪೆದ್ದಿಯಲ್ಲಿ ಜಾನ್ವಿ ಕಪೂರ್ ಅಭಿನಯಿಸುತ್ತಿದ್ದು, ಚಿತ್ರದಲ್ಲಿ ಕನ್ನಡ ಚಿತ್ರರಂಗದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಜಗಪತಿ ಬಾಬು, ದಿವ್ಯೆಂದು ಶರ್ಮಾ ಅವರ ತಾರ ಬಳಗವಿದೆ. ಮೈತ್ರಿ ಮೂವೀ ಮೇಕರ್ಸ್, ಸುಕುಮಾರ್ ರೈಟಿಂಗ್ ಹಾಗೂ ವೃದ್ಧಿ ಸಿನಿಮಾಸ್ ಅಡಿಯಲ್ಲಿ ಚಿತ್ರ ತಯಾರಾಗುತ್ತಿದ್ದು, ಮ್ಯೂಸಿಕ್ ಮಾಂತ್ರಿಕ ಎ.ಆರ್. ರೆಹಮಾನ್ ಅವರ ಸಂಗೀತ, ನವೀನ್ ನೂಲಿ ಸಂಕಲನ, ಆರ್. ರತ್ನವೇಲು ಛಾಯಾಗ್ರಹಣ ಚಿತ್ರಕ್ಕಿದೆ.