ಅನಕಾಪಲ್ಲಿ: ಬಿಯರ್ ಬಾಟಲಿಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿದ್ದರೂ, ಸಹಾಯ ಮಾಡದೇ ಬಾಟಲಿಗಳನ್ನು ಕದ್ದೊಯ್ದ ಅಮಾನವೀಯ ಘಟನೆ ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯಲ್ಲಿ ನಡೆದಿದೆ.
ಅನಕಾಪಲ್ಲಿ ಮತ್ತು ಬಯ್ಯವರಂ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಮದ್ಯದ ಬಾಟಲಿಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿದೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಾವಿನದವಡೆಯಿಂದ ಪಾರಾಗಿದ್ದಾರೆ.
ಟ್ರಕ್ ಬಿದ್ದ ಕೂಡಲೇ ಇತರ ವಾಹನಗಳ ಸವಾರರು ಹಾಗೂ ಸ್ಥಳೀಯರು, ಲಾರಿ ಚಾಲಕ ಹಾಗೂ ಕ್ಲೀನರ್‌ಗೆ ಸಹಾಯ ಮಾಡುವುದನ್ನು ಬಿಟ್ಟು ಬಿಯರ್ ಬಾಟಲಿಗಳನ್ನು ಕದ್ದಿದ್ದಾರೆ. ಈ ಕುರಿತಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ನಾನಾರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿದೆ.(ಏಜೆನ್ಸೀಸ್)