ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೇಶ ಗೌಡರ ಕೊಲೆ ಪ್ರಕರಣದಲ್ಲಿ ಬಸವರಾಜ ಮುತ್ತಗಿಯನ್ನು ಮಾಫಿ ಸಾಕ್ಷಿಯನ್ನಾಗಿಸಿರುವುದನ್ನು ಆಕ್ಷೇಪಿಸಿ ಸಲ್ಲಿಸಿದ ಅರ್ಜಿ ಸಂಬಂಧ ಸಿಬಿಐ ಸೇರಿ ಎಲ್ಲ ಪ್ರತಿವಾದಿಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತಾಗಿ ಸಹ ಆರೋಪಿ ದಿನೇಶ್ ಹಾಗೂ ಅಶ್ವಥ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಪ್ರಕರಣದಲ್ಲಿ ಆರೋಪಿ ಬಸವರಾಜ ಮುತ್ತಗಿ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಲು ಮುಂದಾಗಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಒಪ್ಪುವಂತದಲ್ಲ. ಅವರನ್ನು ಸಾಕ್ಷಿಯನ್ನಾಗಿ ಪರಿಗಣಿಸಬಾರದು ಎಂದು ಮನವಿ ಮಾಡಿದರು.
ವಾದ ಆಲಿಸಿದ ನ್ಯಾಯಪೀಠ ಅರ್ಜಿ ಸಂಬಂಧ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದ್ದು,
ವಿಚಾರಣೆಯನ್ನು ಜ.17 ಕ್ಕೆ ಮುಂದೂಡಿದೆ. ಅಲ್ಲಿಯವರೆಗೆ ಮಾಫಿ ಸಾಕ್ಷಿಯ ಪಾಟೀಸವಾಲಿಗೆ ಒತ್ತಾಯಿಸದಂತೆ ಹೇಳಿದೆ