ನವದೆಹಲಿ: ದೆಹಲಿ ಹಿಂಸಾಚಾರಕ್ಕೆ ಬಲಿಯಾದ ಗುಪ್ತಚರ ದಳದ ಅಧಿಕಾರಿ ಅಂಕಿತ್ ಶರ್ಮಾ ಮೇಲೆ ಹಲ್ಲೆ ನಡೆಸಿದ್ದು ಆಮ್ ಆದ್ಮಿ ಪಕ್ಷದ ನಾಯಕರು ಎಂದು ಅವರ ತಂದೆ ರೋಹಿತ್ ಶರ್ಮಾ ಆರೋಪಿಸಿದ್ದರು.
ಅಂಕಿತ್ ಶರ್ಮಾ ಅವರ ಸಾವಿನಲ್ಲಿ ಆಪ್ ಮುಖಂಡ ತಾಹೀರ್ ಹುಸ್ಸೇನ್ ಅವರ ಪಾತ್ರವಿದೆ ಎಂದು ಬಲವಾದ ಆರೋಪವೂ ಕೇಳಿಬಂದಿತ್ತು.
ಅದಕ್ಕೆ ಪುಷ್ಠಿ ನೀಡುವಂತೆ ಆಪ್ ಕೌನ್ಸಿಲರ್ ತಾಹೀರ್ ಅವರ ಮನೆಯ ಟೆರೇಸ್ನಲ್ಲಿ ಪೆಟ್ರೋಲ್ ಬಾಂಬ್ ಹಾಗೂ ಕಲ್ಲುಗಳು ಪತ್ತೆಯಾಗಿವೆ.
ಮಾಧ್ಯಮವೊಂದಕ್ಕೆ ಸ್ಥಳೀಯರು ಕೊಟ್ಟ ಮಾಹಿತಿ ಅನ್ವಯ ಕಾರ್ಯಾಚರಣೆ ನಡೆಸಿದಾಗ ಟೆರೇಸ್ ಮೇಲೆ ಪೆಟ್ರೋಲ್ ಬಾಂಬ್ಗಳು ಸಿಕ್ಕಿವೆ. ತಾಹೀರ್ ಹುಸ್ಸೇನ್ ಮನೆಯಲ್ಲಿ ಹಲವು ಶಸ್ತ್ರಾಸ್ತ್ರಗಳಿವೆ. ಅವರ ಮನೆಯಲ್ಲಿ ನೂರಾರು ದಂಗೆಕೋರರು ಒಟ್ಟಾಗಿ ಸಭೆ ಸೇರಿದ್ದರು.
ಅಲ್ಲಿಂದ ಬೇರೆಯವರ ಮನೆಯ ಮೇಲೆ ಕಲ್ಲು ಮತ್ತು ಪೆಟ್ರೋಲ್ ಬಾಂಬ್ಗಳನ್ನು ಎಸೆದಿದ್ದಾರೆ ಎಂದು ಸ್ಥಳೀಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಆದರೆ ಅಂಕಿತ್ ಶರ್ಮಾ ಸಾವಿನಲ್ಲಿ ತಮ್ಮ ಹೆಸರು ಕೇಳಿಬರುತ್ತಲೇ ಹುಸ್ಸೇನ್ ಬೇರೆಯದೇ ರೀತಿ ಮಾತನಾಡಿದ್ದರು. ಗಲಭೆಯಲ್ಲಿ ತಮಗೂ ತೊಂದರೆಯಾಗಿದೆ ಎಂದು ತಾಹೀರ್ ಹುಸ್ಸೇನ್ ಹೇಳಿಕೊಂಡಿದ್ದರು. ನಮ್ಮ ಮನೆಗೆ ನುಗ್ಗಿದ ದುಷ್ಕರ್ಮಿಗಳು ಬಲವಂತವಾಗಿ ನನ್ನನ್ನು ಮನೆಯಿಂದ ನೂಕಿದ್ದರು ಎಂದಿದ್ದರು. (ಏಜೆನ್ಸೀಸ್)