hardeep singh puri 
ನ್ಯೂಸ್

GST ಅಡಿಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ… ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು ಗೊತ್ತಾ?

ಮುಂಬೈ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಜಿಎಸ್‌ಟಿ(GST) ವ್ಯಾಪ್ತಿಗೆ ತರುವಲ್ಲಿ ಒಮ್ಮತವನ್ನು ಸಾಧಿಸಲು ರಾಜ್ಯಗಳ ಸಹಕಾರ ಅಗತ್ಯ. ಈ ನಿಟ್ಟಿನಲ್ಲಿ ಅಭಿಪ್ರಾಯಕ್ಕೆ ರಾಜ್ಯಗಳಿಗೆ ಸಲಹೆ ನೀಡಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದು, ರಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗಲಿದೆಯೇ? ಎಂಬ ಆಶಾ ಭಾವ ಜನರಲ್ಲಿ ಮೂಡಿದೆ.

ಮಹಾರಾಷ್ಟ್ರದ ಪುಣೆ ಇಂಟರ್‌ನ್ಯಾಶನಲ್ ಸೆಂಟರ್‌ನ 14 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಮುಂದಿನ 10 ವರ್ಷಗಳಲ್ಲಿ ಭಾರತದ ಇಂಧನ ಭದ್ರತೆಯನ್ನು ಹೆಚ್ಚಿಸುವ ಕಾರ್ಯತಂತ್ರಗಳು ಮತ್ತು ಕ್ರಮಗಳ ಕುರಿತು ಪ್ರಮುಖ ಭಾಷಣ ಮಾಡಿದರು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಜಿಎಸ್‌ಟಿ(GST) ವ್ಯಾಪ್ತಿಗೆ ತರಲು ಬಹಳ ದಿನಗಳಿಂದ ಬೇಡಿಕೆ ಇದೆ. ಇದು ಆದರೆ ದೇಶದ ಜನಸಂಖ್ಯೆ 140 ಕೋಟಿಗೆ ತಲುಪಲಿದೆ. ಆದರೆ ಇದೊಂದು ಬಹುದೊಡ್ಡ ಕಾರ್ಯವಾಗಿದ್ದು, ಇಂಧನದ ಬಳಕೆಯೂ ಮೂರು ಪಟ್ಟು ಹೆಚ್ಚಾಗಿದೆ ಎಂದು ಬಹಿರಂಗಪಡಿಸಿದ್ದಾರೆ.

ರಾಜ್ಯಗಳ ಸಹಕಾರ ಅಗತ್ಯ: GST

ಮುಂದಿನ ಎರಡು ದಶಕಗಳಲ್ಲಿ ವಿಶ್ವದ ಶೇ.25ರಷ್ಟು ಇಂಧನವನ್ನು ಭಾರತ ಬಳಸಿಕೊಳ್ಳಲಿದೆ. ಆದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ದೇಶದ ಎಲ್ಲಾ ರಾಜ್ಯಗಳು ಒಗ್ಗೂಡಬೇಕಾಗಿದೆ. ಇದಕ್ಕೆ ಕೇಂದ್ರ ಸರ್ಕಾರವೂ ಬೆಂಬಲ ನೀಡಲು ಸಿದ್ಧವಿದೆ ಎಂದು ಸ್ಪಷ್ಟಪಡಿಸಿದರು.