ನ್ಯೂಸ್

ಜೈಲಿನಲ್ಲಿ ಇರುವ ದರ್ಶನ್-ಪವಿತ್ರಾ ಗೌಡ​ ಫೋಟೋ ವೈರಲ್​.. | Darshan

Darshan: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದ ಬೆನ್ನಲ್ಲೇ ಎ2 ಆರೋಪಿ ನಟ ದರ್ಶನ್​ ಸೇರಿದಂತೆ 7 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ನ್ಯಾಯಾಂಗ ಬಂಧನಕ್ಕೆ ಕಳಿಸುವ ಮುಂಚೆ ತೆಗೆದುಕೊಂಡಿದ್ದ ಕೆಲ ಆರೋಪಿಗಳ ಚಿತ್ರಗಳು ಇದೀಗ ವೈರಲ್ ಆಗಿವೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಶರಣಾದ ಆರೋಪಿಗಳ ಚಿತ್ರಗಳನ್ನು ನಿಯಮದಂತೆ ಪೊಲೀಸರು ತೆಗೆದಿದ್ದರು. ದರ್ಶನ್​​ ಮತ್ತು ಪವಿತ್ರಾಗೌಡ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗಿದೆ.

ದರ್ಶನ್ ತಲೆಗೂದಲು ಸಂಪೂರ್ಣವಾಗಿ ಬೋಳಿಸಿಕೊಂಡು ಬೋಳು ತಲೆ ಮಾಡಿಕೊಂಡಿದ್ದಾರೆ. ದರ್ಶನ್ ಅವರು ದೇವಾಲಯವೊಂದಕ್ಕೆ ಮುಡಿಕೊಟ್ಟಿದ್ದಾರೆ ಎನ್ನಲಾಗಿದೆ. ಬಂಧನಕ್ಕೆ ಒಳಗಾಗುವ ದಿನದಂದು ದರ್ಶನ್ ಮಾದೇಶ್ವರ ಬೆಟ್ಟಕ್ಕೆ ತೆರಳಿ ದೇವರಿಗೆ ಮುಡಿ ಕೊಟ್ಟು ಬಂದಿದ್ದರು ಎನ್ನಲಾಗಿದೆ.

ಜೈಲಿನೊಳಗೆ ಹೋಗುವ ಮುನ್ನ ದರ್ಶನ್‌ ಪೊಲೀಸರು ತೆಗೆದ ದರ್ಶನ್‌ ಅವರ ವೈರಲ್‌ ಆದ ಫೋಟೋದಲ್ಲಿ ಬೋಳು ತಲೆ, ಸುಕ್ಕುಗಟ್ಟಿದ ಮುಖ ಹಾಗೂ ಬಿಳಿ ಗಡ್ಡದಲ್ಲಿ ನಿಂತಿರುವ ದರ್ಶನ್‌ ಕಾಣಿಸಿಕೊಂಡಿದ್ದಾರೆ. ಇನ್ನು ಪವಿತ್ರಾ ಗೌಡ ನಗುಮುಖದಲ್ಲೇ ಫೋಟೋಗೆ ಪೋಸ್‌ ಕೊಟ್ಟಿರುವ ಹಾಗೆ ಕಾಣಿಸಿಕೊಂಡಿದ್ದಾರೆ.