ನ್ಯೂಸ್

ಕಣ್ಣಿಗೊಂದು ಸವಾಲ್​: ನೀವು ಬುದ್ಧಿವಂತರಾಗಿದ್ರೆ ಅಡುಗೆ ಕೋಣೆಯೊಳಗೆ ಫ್ರಿಡ್ಜ್​ ಎಲ್ಲಿದೆ ಪತ್ತೆಹಚ್ಚಿ!

ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗವರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

ಸದ್ಯ ಸಾಮಾಜಿಕ ಜಾಲತಾಣದಲ್ಲಿ​ ಫೋಟೋವೊಂದು ವೈರಲ್​ ಆಗುತ್ತಿದೆ. ತಕ್ಷಣಕ್ಕೆ ನೋಡಿದರೆ ಮನೆಯೊಳಗೆ ಅಡುಗೆ ಕೋಣೆ ಗೋಚರವಾಗುತ್ತದೆ. ಅಲ್ಲೊಂದು ಫ್ರಿಡ್ಜ್​ ಸಹ ಇಡಲಾಗಿದೆ. ಆ ಫ್ರಿಡ್ಜ್​ ಎಲ್ಲಿದೆ ಎಂಬುದನ್ನು ನೀವು ಪತ್ತೆಹಚ್ಚಬೇಕು. ಆದರೆ, ಪತ್ತೆ ಹಚ್ಚುವುದು ಅಷ್ಟು ಸುಲಭವಲ್ಲ. ಮೆದುಳಿಗೆ ಸ್ವಲ್ಪ ಕೆಲಸ ಕೊಡಬೇಕು. ಸೂಕ್ಷ್ಮವಾಗಿ ಗಮನಿಸಿದರೆ ಫ್ರಿಡ್ಜ್​ ಎಲ್ಲಿದೆ ಎಂದು ಗೊತ್ತಾಗುತ್ತದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಫ್ರಿಡ್ಜ್​ ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿ ಅಡುಗೆ ಮನೆಯೊಳಗಿರುವ ಫ್ರಿಡ್ಜ್​ ಅನ್ನು ಪತ್ತೆಹಚ್ಚಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಫ್ರಿಡ್ಜ್​ ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ, ತಲೆ ಕೆಡಿಸಿಕೊಳ್ಳಬೇಡಿ. ಎಲ್ಲಿದೆ ಅಂತಾ ನಾವು ಹೇಳುತ್ತೇವೆ.

ಅಂದಹಾಗೆ ಅಡುಗೆ ಕೋಣೆ ರೀತಿ ಕಾಣುತ್ತಿರುವುದೇ ಫ್ರಿಡ್ಜ್​. ನೀವು ನೋಡುತ್ತಿರುವುದು ಅಡುಗೆ ಕೋಣೆಯಲ್ಲ. ಅದು ಫ್ರಿಡ್ಜ್​. ಗ್ಲಾಸ್​ನಂತೆ ಇರುವ ಫ್ರಿಡ್ಜ್​ನ ಡೋರ್​ ಮೂಲಕ ಅಡುಗೆ ಕೋಣೆಯ ಪ್ರತಿಬಿಂಬ ನಮಗೆ ಕಾಣುತ್ತಿದೆ ಅಷ್ಟೇ. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋ ವೈರಲ್​ ಆಗುತ್ತಿದ್ದು, ಇದನ್ನು ನೋಡಿ ಅನೇಕರು ಕನ್ಫ್ಯೂಸ್​ ಆಗಿದ್ದಾರೆ. ನಿಮ್ಮ ಗೊಂದಲಕ್ಕೆ ಈಗ ಉತ್ತರ ಸಿಕ್ಕಿತೆಂದು ನಾವು ಭಾವಿಸುತ್ತೇವೆ. (ಏಜೆನ್ಸೀಸ್​)