ನ್ಯೂಸ್

ದೂರು ನೀಡಲು ಬಂದ ತಾಯಿ-ಮಗಳ ಎದುರಲ್ಲೇ ಹಸ್ತಮೈಥುನ ಮಾಡಿಕೊಂಡ ಇನ್ಸ್​ಪೆಕ್ಟರ್: ವಿಡಿಯೋ ವೈರಲ್​!

sspmiracle1982

ಲಖನೌ: ಕಾನೂನು ಪಾಲಕರೇ ಕಾನೂನು ಉಲ್ಲಂಘಿಸುವವರಾದಾಗ, ಇತರರು ಕಾನೂನು ನಿಯಮವನ್ನು ಅನುಸರಿಸುತ್ತಾರೆಂದು ನಿರೀಕ್ಷಿಸುವುದು ಕಷ್ಟ. ಹೇಸಿಗೆ ತರುವಂಥ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯಲ್ಲಿ ಜೂನ್ 22 ರಂದು ಪೊಲೀಸ್ ಠಾಣೆಗೆ ದೂರು ಸಲ್ಲಿಸಲು ಮಹಿಳೆ ಹಾಗೂ ಆಕೆಯ ಮಗಳು ಹೋದಾಗ ಅವರೆದುರಲ್ಲೇ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಕ್ಯಾಮೆರಾದಲ್ಲಿ ಸಿಕ್ಕಿಬಿದ್ದಿದ್ದಾರೆ.

ಆರೋಪಿ ಇನ್ಸ್‌ಪೆಕ್ಟರ್‌ನನ್ನು ಭೀಷಮ್ ಪಾಲ್ ಸಿಂಗ್ ಯಾದವ್ ಎಂದು ಗುರುತಿಸಲಾಗಿದೆ. ಸಂತ್ರಸ್ತೆಯ ಮಗಳು ಪೊಲೀಸ್ ಅಧಿಕಾರಿಯ ಈ ಅಸಭ್ಯ ವರ್ತನೆಯ ವಿಡಿಯೋ ಚಿತ್ರೀಕರಿಸಿದ್ದಾಳೆ. ಘಟನೆಯ ವಿಡಿಯೋ ಮಂಗಳವಾರ ವೈರಲ್ ಆಗಿದೆ. ಸಂತ್ರಸ್ತೆಯ ದೂರಿನ ಮೇರೆಗೆ ಭಟ್ನಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಡಿಯೋರಿಯಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಶ್ರೀಪತಿ ಮಿಶ್ರಾ ಹೇಳಿದ್ದಾರೆ. ಜೂನ್ 26 ರಂದು ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಜೂನ್ 22 ರಂದು ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿದ್ದೆ  ಭೂ ವಿವಾದ ಪ್ರಕರಣದ ಬಗ್ಗೆ ಚರ್ಚಿಸುವಾಗ ಇನ್ಸ್‌ಪೆಕ್ಟರ್ ಅಸಭ್ಯ ಕೃತ್ಯ ಎಸಗಿದ್ದಾನೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾರೆ. 

ಈ ಸಮಯದಲ್ಲಿ, ಸಂತ್ರಸ್ತೆಯ ಮಗಳು ಆರೋಪಿ ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆಯ ವಿಡಿಯೋವನ್ನು ರೆಕಾರ್ಡ್ ಮಾಡಿದ್ದಾಳೆ. ಸಂತ್ರಸ್ತೆಯ ನೆರೆಹೊರೆಯವರು ಇತರ ವ್ಯಕ್ತಿಗಳಿಗೆ ವೀಡಿಯೊವನ್ನು ಫಾರ್ವರ್ಡ್ ಮಾಡಿದ ನಂತರ ವೀಡಿಯೊ ವೈರಲ್ ಆಗಿದೆ. ಈ ಘಟನೆಯು ಸ್ಥಳೀಯ ನಿವಾಸಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ, ಅವರು ಆರೋಪಿ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.