ನ್ಯೂಸ್

ವಿಮಾನ ಟೇಕ್ ಆಫ್ ಆದ ಕೇವಲ 5 ನಿಮಿಷಗಳಲ್ಲಿ ಪತನ! ತಾತ್ಕಾಲಿಕವಾಗಿ ವಿಮಾನ ನಿಲ್ದಾಣ ಮುಚ್ಚಲಾಗಿದೆ..

plane crash: ಗುಜರಾತಿನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್​ ಆದ  5 ನಿಮಿಷದಲ್ಲಿ ಪತನಗೊಂಡಿದೆ. ವಿಮಾನ ಅಪಘಾತದ ನಂತರ ಅಹಮದಾಬಾದ್ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಬೋಯಿಂಗ್ 787-8 ಡ್ರೀಮ್‌ಲೈನರ್ ಹೆಸರಿನ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರನ್ನು ಹೊತ್ತೊಯ್ಯುತ್ತಿತ್ತು. ಈ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ವಿಮಾನದಲ್ಲಿದ್ದರು.

ಈ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸರು, ಅಗ್ನಿಶಾಮಕ ದಳ ಮತ್ತು ವೈದ್ಯಕೀಯ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಅಪಘಾತದಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ.

ವಿಮಾನವು ಅಹಮದಾಬಾದ್‌ನಿಂದ ಲಂಡನ್‌ಗೆ ಹಾರುತ್ತಿತ್ತು. ಟೇಕ್ ಆಫ್ ಸಮಯದಲ್ಲಿ ಮರಕ್ಕೆ ಡಿಕ್ಕಿ ಹೊಡೆದ ನಂತರ ಅಪಘಾತ ಸಂಭವಿಸಿದೆ ಎಂದು ಆರಂಭಿಕ ಮಾಹಿತಿ. ಅಪಘಾತದ ಸಮಯದಲ್ಲಿ ವಿಮಾನದಲ್ಲಿ 242 ಜನರಿದ್ದರು. ವಿಮಾನ ಅಪಘಾತದ ನಂತರ ಅಹಮದಾಬಾದ್ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಇಂದು (ಜೂನ್ 12) ಸಂಜೆ 5 ಗಂಟೆಯವರೆಗೆ ವಿಮಾನ ನಿಲ್ದಾಣ ಮುಚ್ಚಲಾಗುವುದು.

ದುರಂತದ ಆಘಾತಕಾರಿ ದೃಶ್ಯಗಳನ್ನು ಸಹ ಬಿಡುಗಡೆ ಮಾಡಲಾಗಿದೆ. ವಿಮಾನವು ಟೇಕ್ ಆಫ್ ಆದ ಐದು ನಿಮಿಷಗಳಲ್ಲಿ ಪತನಗೊಂಡಿದೆ. ಮರಕ್ಕೆ ಡಿಕ್ಕಿ ಹೊಡೆದ ನಂತರ ವಿಮಾನ ಅಪಘಾತಕ್ಕೀಡಾಗಿದೆ ಎಂದು ವರದಿಗಳು ತಿಳಿಸಿವೆ. ಯಾವುದೇ ಅಧಿಕೃತ ದೃಢೀಕರಣವಿಲ್ಲ.