ಕೆ.ಆರ್.ನಗರ ತಾಲೂಕು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾದ ಪುಷ್ಪಲತಾ ಸಿ.ಪಿ.ರಮೇಶ್ ಮತ್ತು ಉಪಾಧ್ಯಕ್ಷ ಪ್ರದೀಪ್ ಕೃಷ್ಣೇಗೌಡ ಅವರನ್ನು ನಿರ್ದೇಶಕರು ಮತ್ತು ಬೆಂಬಲಿಗರು ಅಭಿನಂಧಿಸಿದರು. 
ನ್ಯೂಸ್

ಪಿಎಲ್‌ಡಿ ಬ್ಯಾಂಕ್‌ಗೆ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಕೆ.ಆರ್.ನಗರ: ತಾಲೂಕು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಪುಷ್ಪಲತಾ ಸಿ.ಪಿ.ರಮೇಶ್ ಮತ್ತು ಉಪಾಧ್ಯಕ್ಷರಾಗಿ ಪ್ರದೀಪ್ ಕೃಷ್ಣೇಗೌಡ ಅವಿರೋಧವಾಗಿ ಆಯ್ಕೆಯಾದರು.

ಪಟ್ಟಣದ ಸಿ.ಎಂ.ರಸ್ತೆಯಲ್ಲಿರುವ ಬ್ಯಾಂಕಿನ ಆಡಳಿತ ಕಚೇಯಲ್ಲಿ ಬುಧವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇವರಿಬ್ಬರನ್ನು ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯಾಗಿದ್ದ ಹುಣಸೂರು ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಅನಸೂಯಾ ಆಯ್ಕೆಯನ್ನು ಪ್ರಕಟಿಸಿದರು.

ಚುನಾವಣೆಯಲ್ಲಿ ನಿರ್ದೇಶಕರಾದ ಎಸ್.ಎಂ.ಸೋಮಣ್ಣ, ಮಂಗಳಾ ಪ್ರಸಾದ್, ಎಂ.ಎಸ್.ಹರಿಚಿದಂಬರ, ಡಿ.ಆರ್.ರಾಹುಲ್, ಬಿ.ಎಸ್.ಚಂದ್ರಹಾಸ, ಕುಳ್ಳಬೋರೇಗೌಡ, ಕೆ.ಟಿ.ಚಂದ್ರೇಗೌಡ, ಕಲಾವತಿ ರಾಮಚಂದ್ರ, ಇಂದ್ರೇಶ್, ಮಹೇಶ್, ಗಾಯತ್ರಮ್ಮ, ದೊಡ್ಡಯ್ಯ, ರಮೇಶ್‌ನಾಯಕ, ಕಾರ್ಯದರ್ಶಿ ನವೀನ್‌ಕುಮಾರ್ ಇದ್ದರು.

ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕಟಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು. ಶಾಸಕ ಡಿ.ರವಿಶಂಕರ್ ಮತ್ತು ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಅವರ ಪರ ಘೋಷಣೆಗಳನ್ನು ಮೊಳಗಿಸಿ ವಿಜಯೋತ್ಸವ ಆಚರಿಸಿದರು.

ನೂತನ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರನ್ನು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಮಹೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ವಕ್ತಾರ ಸೈಯದ್ ಜಾಬೀರ್, ಕೆಪಿಸಿಸಿ ಸದಸ್ಯ ಸಿ.ಪಿ.ರಮೇಶ್, ಅರ್ಜುನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ದಿಲೀಪ್‌ಗೌಡ ಮತ್ತಿತರರು ಅಭಿನಂದಿಸಿದರು.