ಕೋಲಾರ ನಗರದ ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಆವರಣದಲ್ಲಿ ಮಾಜಿ ಅಧ್ಯಕ್ಷ ವಿಟ್ಟಪನಹಳ್ಳಿ ವೆಂಕಟೇಶ್ ಅವರನ್ನು ಸನ್ಮಾನಿಸಲಾಯಿತು. 
ನ್ಯೂಸ್

ಸಾಲ ವಸೂಲಿಯಲ್ಲಿ ಪಿಎಲ್ಡಿ ಬ್ಯಾಂಕ್ ಪ್ರಥಮ

ಕೋಲಾರ: ಗ್ರಾಮೀಣಾಭಿವೃದ್ಧಿ ಬ್ಯಾಂಕ್ ರೈತರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, ರೈತರು ನಂಬಿಕೆ ಉಳಿಸಿಕೊಂಡು ಪಡೆದುಕೊಂಡಿರುವ ಸಾಲವನ್ನು ಪ್ರಾಮಾಣಿಕವಾಗಿ ಮರುಪಾವತಿ ಮಾಡಬೇಕು ಎಂದು ಬ್ಯಾಂಕ್‌ನ ಮಾಜಿ ಅಧ್ಯಕ್ಷ ವಿಟ್ಟಪನಹಳ್ಳಿ ವೆಂಕಟೇಶ್ ಹೇಳಿದರು.

ನಗರದ ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಆವರಣದಲ್ಲಿ ಮಾಜಿ ಅಧ್ಯಕ್ಷ ವಿಟ್ಟಪನಹಳ್ಳಿ ವೆಂಕಟೇಶ್ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಕಾಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಪ್ರಸಕ್ತ ಸಾಲಿನಲ್ಲಿ ಸಾಲ ವಸೂಲಾತಿಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಸಾಲ ವಸೂಲಾತಿಯಲ್ಲಿ ಬ್ಯಾಂಕ್ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಪ್ರಥಮ ಸ್ಥಾನ ಗಳಿಸಿದ್ದು ಹೆಮ್ಮೆಯಾಗಿದೆ. 11 ಲಕ್ಷ ರೂ. ಲಾಭಗಳಿಸಿ ಬೇರೆ ಬ್ಯಾಂಕ್‌ಗಳಿಗೆ ಮಾದರಿಯಾಗಿದ್ದು ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.
ಬ್ಯಾಂಕ್ ಅಧ್ಯಕ್ಷ ಬೊಮ್ಮಸಂದ್ರ ಕೃಷ್ಣೇಗೌಡ ಮಾತನಾಡಿ, ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ, ವೆಂಕಟಗಿರಿಯಪ್ಪ, ಸಿ.ಬೈರೇಗೌಡ ಅಂತಹ ನಾಯಕರು ಅಧ್ಯಕ್ಷರಾಗಿದ್ದ ಬ್ಯಾಂಕ್ ಇದು. ರೈತರ ಅಭಿವೃದ್ಧಿಗಾಗಿ ತಮ್ಮದೇ ಆದ ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತಾ ಬಂದಿದೆ ಎಂದು ಹೇಳಿದರು.