ನ್ಯೂಸ್

ಶ್ರೀಸಿದ್ದಗಂಗಾ ಮಠ ತಲುಪಿದ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ಸಾಥ್​

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರು ಹೆಲಿಪ್ಯಾಡ್​ನಿಂದ ರಸ್ತೆ ಮಾರ್ಗವಾಗಿ ಸಿದ್ದಗಂಗ ಮಠದತ್ತ ತೆರಳಿದರು.

ಹೆಲಿಕಾಪ್ಟರ್​ನಲ್ಲಿ ಸಿಎಂ ಯಡಿಯೂರಪ್ಪ ಅವರೊಂದಿಗೆ ತುಮಕೂರಿಗೆ ಆಗಮಿಸಿದರು. ತುಮಕೂರು ಜಿಲ್ಲಾಧಿಕಾರಿ ಹಾಗೂ ಮೇಯರ್​ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.

ಅಲ್ಲಿಂದ ರಸ್ತೆ ಮಾರ್ಗವಾಗಿ ಮೋದಿ ಅವರು ಸಿದ್ದಗಂಗಾ ಮಠಕ್ಕೆ ತೆರಳಿದರು. ಮಠದಲ್ಲಿ 45 ನಿಮಿಷಗಳ ಕಾಲ ಇದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.