ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಸ್ಟೀಸ್ ಡಿ. ವೈ. ಚಂದ್ರಚೂಡ್ ಅವರ ನಿವಾಸದಲ್ಲಿ ನಡೆದ ಗಣೇಶ ದೇವರ ಪೂಜೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು.
ಇದನ್ನೂ ಓದಿ: ‘ಆ ಕಾರಣಕ್ಕೇ ಅವಕಾಶಗಳನ್ನು ಕಳೆದುಕೊಂಡೆ’: ಚಿತ್ರರಂಗದಲ್ಲಿ ತಾನು ಎದುರಿಸಿದ ಸಮಸ್ಯೆ ಬಿಚ್ಚಿಟ್ಟ ‘ಗಿಲ್ಲಿ’ನಟಿ..!
ಪ್ರಧಾನಿ ಮೋದಿ ಮಹಾರಾಷ್ಟ್ರ ಸಂಪ್ರದಾಯದಂತೆ ಕ್ಯಾಪ್ ಧರಿಸಿ ಸಮಾರಂಭದಲ್ಲಿ ಭಾಗವಹಿಸಿದ್ದರು. ಬಳಿಕ ಮೋದಿ ಅವರು ತಮ್ಮ ಎಕ್ಸ್ ಅಕೌಂಟ್ ನಲ್ಲಿ ಸಂಬಂಧಿತ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ ಅವರನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದಂಪತಿ ಆತ್ಮೀಯವಾಗಿ ಆಹ್ವಾನಿಸಿದರು.
ಆದರೆ ಈ ಬಗ್ಗೆ ಮಹಾರಾಷ್ಟ್ರದ ಶಿವಸೇನೆ ಸಂಸದ ಸಂಜಯ್ ರಾವುತ್ ಪ್ರತಿಕ್ರಿಯಿಸಿದ್ದು, ಪ್ರಧಾನಿ ಮೋದಿ ಅವರು ಸಿಜೆಐ ಮನೆಗೆ ಹೋಗುವುದರಿಂದ ನ್ಯಾಯಾಂಗದ ನಿಷ್ಪಕ್ಷಪಾತದ ಬಗ್ಗೆ ಜನರು ಅನುಮಾನಿಸುವ ಸಾಧ್ಯತೆಯಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ರಾಜಕೀಯ ಮುಖಂಡರೊಬ್ಬರು(ಪ್ರಧಾನಿ) ಸಂವಿಧಾನದ ಪಾಲಕರನ್ನು ಭೇಟಿಯಾಗಿರುವುದು ಜನರಲ್ಲಿ ಅನುಮಾನ ಮೂಡಿಸುತ್ತದೆ ಎಂದಿದ್ದಾರೆ.
ಮಹಾರಾಷ್ಟ್ರದ ಸ್ಪೀಕರ್ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯನ್ನು ನಿಜವಾದ ಪಕ್ಷವೆಂದು ಗುರುತಿಸಿದ್ದು, ಈ ನಿರ್ಧಾರವನ್ನು ಪ್ರಶ್ನಿಸಿ ಉದ್ಧವ್ ಠಾಕ್ರೆ ಬಣ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ನ ಪೀಠದಿಂದ ಸಿಜೆ ಹೊರಬರಬೇಕು ಎಂದು ರಾವುತ್ ಅಭಿಪ್ರಾಯಪಟ್ಟಿದ್ದಾರೆ.
ಇದರೊಂದಿಗೆ ಸಿಜೆಐ ನಿವಾಸದ ಪೂಜಾ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರು ಭೇಟಿ ನೀಡಿರುವುದು ವಿವಾದಕ್ಕೀಡಾಗಿದೆ. ಶಿವಸೇನೆ ಸಂಸದ ರಾವುತ್ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯಿಸಿದ್ದು, ಪ್ರಧಾನಿ ಮೋದಿ ಅವರು ಗಣಪತಿ ಪೂಜೆ ಆಚರಣೆಯಲ್ಲಿ ಮಾತ್ರ ಭಾಗವಹಿಸಿದ್ದಾರೆ. ಇದು ನಮ್ಮ ಸಂಸ್ಕೃತಿಯ ಭಾಗ ಎಂಬುದನ್ನು ಈ ಸಂದರ್ಭ ವಿವರಿಸುತ್ತದೆ ಎಂದು ಸ್ಪಷ್ಟಪಡಿಸಿದೆ.
ಪ್ರಶಾಂತ್ ಕಳವಳ: ಸಿಜೆಐ ನಿವಾಸದ ಪೂಜಾ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರು ಭೇಟಿ ನೀಡಿರುವುದಕ್ಕೆ ವಕೀಲ ಮತ್ತು ಹೋರಾಟಗಾರ ಪ್ರಶಾಂತ್ ಭೂಷಣ್ ಕಳವಳ ವ್ಯಕ್ತಪಡಿಸಿದ್ದಾರೆ, ಇದು ನ್ಯಾಯಾಂಗಕ್ಕೆ ಕೆಟ್ಟ ಸಂಕೇತವನ್ನು ಕಳುಹಿಸುತ್ತದೆ ಎಂದು
ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಭೇಟಿಯ ಔಚಿತ್ಯವನ್ನು ಪ್ರಶ್ನಿಸಿದ್ದಾರೆ. ನ್ಯಾಯಾಂಗದ ಘನತೆಗೆ ಧಕ್ಕೆ ತರುವಂತಹ ಕ್ರಮಗಳನ್ನು ತಪ್ಪಿಸುವ ಅಗತ್ಯವಿದೆ. ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಪ್ರತ್ಯೇಕತೆಯನ್ನು ಎತ್ತಿಹಿಡಿಯಬೇಕಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.