ನ್ಯೂಸ್

ಸಿ.ಆರ್​.ಪಾಟೀಲ್​ಗೆ ಪ್ರಧಾನಿ ಮೋದಿ ಅಭಿನಂದನೆ: ಈ ಬಾರಿಯೂ ಭೂಪೇಂದ್ರ ಪಟೇಲ್​ಗೆ ಗುಜರಾತ್​ ಸಿಎಂ ಗಾದಿ

ನವದೆಹಲಿ: ಗುಜರಾತ್​ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿನತ್ತ ಮುನ್ನುಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಸಿ.ಆರ್​.ಪಾಟೀಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಅಭಿನಂದಿಸಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಡಿ.12ರೊಳಗೆ ಹೊಸ ಸರ್ಕಾರ ರಚನೆಯಾಗಲಿದ್ದು, ಈಗಿನ ಸಿಎಂ ಭೂಪೇಂದ್ರ ಪಟೇಲ್​ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ 7ನೇ ಬಾರಿಗೆ ಬಿಜೆಪಿ ಅಧಿಕಾರದ ಗದ್ದುಗೆಗೆ ಏರುತ್ತಿದೆ.

ಡಿ.1 ಮತ್ತು 5ರಂದು ಗುಜರಾತ್​ನ 182 ವಿಧಾನಸಭಾ ಸೀಟುಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮತದಾನೋತ್ತರ ಸಮೀಕ್ಷೆಗಳೂ ಬಿಜೆಪಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದವು.