PM Modi: ಯುಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಭಾರತದ ಬೆಂಬಲ ಇರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯೂ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ಗೆ ಶನಿವಾರ (ಸೆಪ್ಟೆಂಬರ್, 6) ತಿಳಿಸಿದ್ದಾರೆ.
ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ನೊಂದಿಗೆ ಪೋನ್ನಲ್ಲಿ ಮಾತನಾಡಿದ ಮೋದಿ, ಭಾರತ ಮತ್ತು ಫ್ರಾನ್ಸ್ ನಡುವಿನ ಮತ್ತು ಸ್ಥಿರತೆಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ ಎಂದು ಮೋದಿ ಹೇಳಿದ್ದಾರೆ.
ಮುಂದುವರೆದು ಮಾತನಾಡಿದ ಉಭಯ ನಾಯಕರು, ಉಕ್ರೇನ್ ಸಂಘರ್ಷವನ್ನು ಶೀಘ್ರವಾಗಿ ಕೊನೆಗೊಳಿಸಲು ನಡೆಯುತ್ತಿರುವ ಪ್ರಯತ್ನಗಳ ಕುರಿತು ಚರ್ಚಿಸಿದ್ದಾರೆ. ಯುಕ್ರೇನ್ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸಲು ಭಾರತದ ಬೆಂಬಲವನ್ನು ಪ್ರಧಾನಿ ಪುನರುಚ್ಚರಿಸಿದರು.
ಯುಕ್ರೇನ್ ಸಂಘರ್ಷವನ್ನು ಶೀಘ್ರವಾಗಿ ಕೊನೆಗೊಳಿಸಲು ನಡೆಯುತ್ತಿರುವ ಪ್ರಯತ್ನಗಳ ಕುರಿತು ಉಭಯ ನಾಯಕರು ಚರ್ಚಿಸಿದರು, ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸಲು ಭಾರತದ ಕರೆಯನ್ನು ಪ್ರಧಾನಿ ಪುನರುಚ್ಚರಿಸಿದರು.
ಇದನ್ನೂ ಓದಿ: ಯುಕ್ರೇನ್ ಮೇಲೆ ಡ್ರೋನ್ಗಳ ಮಳೆ ಸುರಿಸಿದ ರಷ್ಯಾ: ದಾಳಿಗೆ ಮೂರು ಬಲಿ,18ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ| Russia attack
ಕಳೆದ ತಿಂಗಳು ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಯುಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಡುವಿನ ಮಾತುಕತೆಯ ಸಂದರ್ಭದಲ್ಲಿ ಮ್ಯಾಕ್ರನ್ ಭಾಗಿಯಾಗಿದ್ದರು.
ಈ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಅಧ್ಯಕ್ಷ ಮ್ಯಾಕ್ರನ್ರೊಂದಿಗೆ ಉತ್ತಮ ಸಂಭಾಷಣೆ ನಡೆಸಿದೆ. ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದಲ್ಲಿನ ಪ್ರಗತಿಯನ್ನು ನಾವು ಪರಿಶೀಲಿಸಿದ್ದೇವೆ ಎಂದು ತಿಳಿಸಿದ್ದಾರೆ.
ಯುಕ್ರೇನ್ ಸಂಘರ್ಷವನ್ನು ಶೀಘ್ರವಾಗಿ ಕೊನೆಗೊಳಿಸುವ ಪ್ರಯತ್ನಗಳು ಸೇರಿದಂತೆ ಅಂತರರಾಷ್ಟ್ರೀಯ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು. ಜಾಗತಿಕ ಶಾಂತಿ ಮತ್ತು ಸ್ಥಿರತೆಯನ್ನು ಬೆಳೆಸುವಲ್ಲಿ ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆ ಪ್ರಮುಖ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.
ರಷ್ಯಾ-ಯುಕ್ರೇನ್ ಸಂಘರ್ಷವನ್ನು ಮಾತುಕತೆ ಮೂಲಕ ಕೊನೆಗೊಳಿಸಲು ಭಾರತ ನಿರಂತರವಾಗಿ ಕರೆ ನೀಡುತ್ತಿದೆ.(ಏಜೆನ್ಸೀಸ್)