ನ್ಯೂಸ್

ಪ್ರಧಾನಿ ಮೋದಿ ಭೇಟಿ ಮಾಡಿದ ಜಾರ್ಖಾಂಡ್ ಸಿಎಂ ಹೇಮಂತ್ ಸೂರೇನ್

ನವದೆಹಲಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಪ್ರಧಾನಿ ಮಂತ್ರಿಯೊಂದಿಗಿನ ಅವರ ಭೇಟಿಯ ಚಿತ್ರವನ್ನು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ ಸಿಎಂ ಸೂರೇನ್ ಇದೊಂದು ಸೌಜನ್ಯ ಭೇಟಿ ಎಂದು ಬರೆದುಕೊಂಡಿದ್ದಾರೆ.

ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧಿತರಾಗಿದ್ದ ಜಾರ್ಖಂಡ್ ಮುಕ್ತಿ ಮೋರ್ಚಾ ಮುಖ್ಯಸ್ಥ ಹೇಮಂತ್ ಸೊರೇನ್ ಅವರನ್ನು ಜನವರಿ 31 ರಂದು ಬಂಧನ ಮಾಡಿತ್ತು. ಅಂದೇ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. 5 ತಿಂಗಳ ಬಳಿಕ ಜೂನ್ 28 ರಂದು ಜೈಲಿನಿಂದ ಬಿಡುಗಡೆಯಾಗಿದ್ದರು. ಜುಲೈ 4ರಂದು ಮತ್ತೆ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು.