ನ್ಯೂಸ್

ಸ್ವಾತಂತ್ರ್ಯದ ಅಮೃತ ಮಹೋತ್ಸವ: 9ನೇ ಬಾರಿ ಧ್ವಜಾರೋಹಣ ನೆರವೇರಿಸಿ, ಪ್ರಧಾನಿ ಮೋದಿ ಭಾಷಣ ಆರಂಭ

ನವದೆಹಲಿ: ದೇಶಾದ್ಯಂತ ಮನೆಮನೆಯಲ್ಲೂ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಕೆಂಪುಕೋಟೆಯ ಮೇಲೆ ಸತತ 9ನೇ ಬಾರಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಕೆಂಪುಕೋಟೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ನೇರಪ್ರಸಾರವನ್ನು ಈ ಕೆಳಗಿನ ದಿಗ್ವಿಜಯ ನ್ಯೂಸ್​ ಫೇಸ್​ಬುಕ್​​ ಲೈವ್​ನಲ್ಲಿ ವೀಕ್ಷಿಸಬಹುದಾಗಿದೆ.

ಎಲ್ಲೆಡೆ ಕಟ್ಟೆಚ್ಚರ ನವದೆಹಲಿ: ದೇಶಾದ್ಯಂತ ಸ್ವಾತಂ ತ್ರ್ಯದ ಅಮೃತ ಮಹೋತ್ಸವ ಸಂಭ್ರಮ ಮನೆ ಮಾಡಿರುವಂತೆಯೇ, ಉಗ್ರಭೀತಿಯೂ ಆವರಿಸಿದೆ. ಆ.15ರ ದಿನವನ್ನೇ ಗುರಿಯಾಗಿಸಿಕೊಂಡು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಲಾಗಿದೆ ಎಂದು ಕೇಂದ್ರೀಯ ಗುಪ್ತಚರ ಪಡೆಯ ವರದಿ ಎಚ್ಚರಿಸಿದ್ದು, ಕೆಲ ಷಡ್ಯಂತ್ರಗಳು ಬಯಲಾಗಿವೆ. ದೆಹಲಿಯಲ್ಲಿ 2 ದಿನಗಳ ಹಿಂದಷ್ಟೇ ಅಪಾರ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಬೆನ್ನಲ್ಲೇ, ಭಾನುವಾರ ಪಂಜಾಬ್​ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಲಾಗಿದ್ದು, ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾಕ್ ಐಎಸ್​ಐನೊಂದಿಗೆ ನಂಟು ಹೊಂದಿರುವುದು ಬಯಲಾಗಿದೆ. ಈ ಕಾರಣಕ್ಕಾಗಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಪ್ರಧಾನಿ ಮೋದಿ ಪಾಲ್ಗೊಳ್ಳಲಿರುವ ದೆಹಲಿ ಕೆಂಪುಕೋಟೆಯ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಭದ್ರತೆ ನೀಡಲಾಗಿದೆ.