ಬೆಂಗಳೂರು: ಭಾರತದ ಚಂದ್ರಯಾನ 3 ಯಶಸ್ವಯಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಭಾರ ಯಶಸ್ವಿಯಾಗಿ ವಿಕ್ರಮ್ ಲ್ಯಾಂಡರ್ ಇಳಿಸಿದೆ. ಇಸ್ರೋ ಸಾಧನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೊಂಡಾಡಿದ್ದಾರೆ.
ಭಾರತದ ಚಂದ್ರಯಾನ 3 ಯೋಜನೆ ಯಶಸ್ವಿಯಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಲ್ಯಾಂಡರ್ ಇಳಿಸುವ ಮೂಲಕ ಇಸ್ರೋ ಮೈಲಿಗಲ್ಲು ನಿರ್ಮಿಸಿದೆ. ಈವರೆಗೂ ವಿಶ್ವದ ಯಾವುದೇ ದೇಶವೂ ಭೇದಿಸದ ಚಂದ್ರನ ದಕ್ಷಿಣ ಧ್ರುವದಲ್ಲಿ ಇಸ್ರೋ ವಿಜ್ಞಾನಿಗಳು ಲ್ಯಾಂಡರ್ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಐತಿಹಾಸಿಕ ಕ್ಷಣಕ್ಕೆ ವಿಶ್ವ ಸಾಕ್ಷಿಯಾಗಿದೆ.
ಸೌತ್ ಆಫ್ರಿಕಾದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಇಸ್ರೋ ನೇರ ಪ್ರಸಾರದಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ಚಂದ್ರಯಾನ ಯಶಸ್ವಿ ಲ್ಯಾಂಡಿಂಗ್‌ಗೆ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಇಸ್ರೋ ವಿಜ್ಞಾನಿಗಳನ್ನು ಹಾಗೂ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು. ಅವರು ಈ ಕ್ಷಣ ಅಭೂತಪೂರ್ವ ಎಂದು ಬಣ್ಣಿಸಿದ್ದು, ಇಸ್ರೋ ಮತ್ತು ಇಡೀ ದೇಶವನ್ನು ಅಭಿನಂದಿಸಿದ್ದಾರೆ.
ಇಸ್ರೋ ವಿಜ್ಞಾನಿಗಳು ಇತಿಹಾಸ ಸೃಷ್ಟಿಸಿದ್ದಾರೆ. ಐತಿಹಾಸ ಕ್ಷಣಕ್ಕೆ ನಾವೆಲ್ಲ ಸಾಕ್ಷಿಯಾಗಿದ್ದೇವೆ. ಈಗ ಭಾರತ ಚಂದ್ರನ ಮೇಲಿದೆ. ಚಂದ್ರಯಾನ-3 ಯಶಸ್ವಿಗೆ ಶ್ರಮಿಸಿದ ಪ್ರತಿಯೊಬ್ಬ ವಿಜ್ಞಾನಿಗೂ ಧನ್ಯವಾದಗಳು. ಈ ಯಶಸ್ಸು ಪ್ರತಿಯೊಬ್ಬ ಭಾರತೀಯನಿಗೂ ಸಲ್ಲುತ್ತದೆ. ಬಗಹುದೂರದಲ್ಲಿರುವ ಚಂದ್ರನನ್ನು ತಲುಪಲು ನಾವು ಯಶಸ್ವಿಯಾಗಿದ್ದೇವೆ. ಇಂದಿನಿಂದ ಚಂದ್ರನ ಕಥೆಗಳು ಬದಲಾಗುತ್ತದೆ ಎಂದಿದ್ದಾರೆ.
ಪ್ರತಿಯೊಬ್ಬ ಭಾರತೀಯನೂ ಇಂದು ಸಂಭ್ರಮ ಆಚರಿಸುತ್ತಿದ್ದಾನೆ. ಪ್ರತಿ ಮನೆಯೂ ಆಚರಿಸುತ್ತಿದೆ. ಈ ಹೆಮ್ಮೆಯ ಕ್ಷಣದಲ್ಲಿ ನಾನು ನನ್ನ ದೇಶದ ಜನರೊಂದಿಗೆ ಸಂಪರ್ಕ ಹೊಂದಿದ್ದೇನೆ. ಇದು ಹೊಸ ಯುಗದ ಉದಯವಾಗಿದೆ. ಈ ಹಿಂದೆ ಯಾವುದೇ ದೇಶವು (ಚಂದ್ರನ ದಕ್ಷಿಣ ಧ್ರುವ) ಅಲ್ಲಿಗೆ ತಲುಪಿಲ್ಲ. ಕಠಿಣ ಪರಿಶ್ರಮದಿಂದ ನಮ್ಮ ವಿಜ್ಞಾನಿಗಳನ್ನು ನಾವು ಅಲ್ಲಿಗೆ ತಲುಪಿದ್ದೇವೆ ಎಂದು ಮೋದಿ ಹೇಳಿದರು.
ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಐತಿಹಾಸಿಕ ದಿನ. ಚಂದ್ರಯಾನ-3 ಗಮನಾರ್ಹ ಯಶಸ್ಸಿಗಾಗಿ ಇಸ್ರೋಗೆ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಟ್ವೀಟ್ ಸಹ ಮಾಡಿದ್ದಾರೆ.