ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಮರ್ ಜವಾನ್ ಜ್ಯೋತಿಗೆ ಆಗಮಿಸಿ ವೀರ ಮರಣವನ್ನಪ್ಪಿದ ಸೈನಿಕರಿಗೆ ಗೌರವ ಸಲ್ಲಿಸಿದರು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಮರ್ ಜವಾನ್ ಜ್ಯೋತಿ ಬಳಿ ಪ್ರಧಾನಿಯನ್ನು ಆತ್ಮೀಯವಾಗಿ ಬರ ಮಾಡಿಕೊಂಡರು.
ಹುತಾತ್ಮ ಯೋಧರ ನೆನಪಿಗಾಗಿ ಕಟ್ಟಿಸಿರುವ ಅಮರ್ ಜವಾಬ್ ಜ್ಯೋತಿಯಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, 3 ಸೇನಾ ಮುಖ್ಯಸ್ಥರು ಗೌರವ ನಮನ ಸಲ್ಲಿಸಿದರು. ಗೌರವ ಸಲ್ಲಿಸಿದರು. ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಂತರ ಕರ್ತವ್ಯಪಥದತ್ತ ಮೋದಿ ಸಾಗಿದರು.
74ನೇ ಗಣರಾಜ್ಯೋತ್ಸವ ಪರೇಡ್ನಲ್ಲಿ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್ ಸಿಸಿ ಆಗಮಿಸಿದ್ದಾರೆ.