ನ್ಯೂಸ್

8ರಂದು ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ ನರೇಂದ್ರ ಮೋದಿ, ಕೋವಿಡ್​ 19 ಪರಿಸ್ಥಿತಿ ಕುರಿತು ವಿಡಿಯೋ ಕಾನ್ಫರೆನ್ಸ್​

ನವದೆಹಲಿ: ದೇಶದಲ್ಲಿ ಕರೊನಾ ವೈರಸ್​ ಸೋಂಕಿನ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ 8ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

ದೇಶದಲ್ಲಿ ಕರೊನಾ ವೈರಸ್​ ಸೋಂಕು ಹರಡುವಿಕೆ ಆರಂಭವಾದ ನಂತರದಲ್ಲಿ ಪ್ರಧಾನಿ ಮೋದಿ ಪ್ರತಿಪಕ್ಷಗಳ ನಾಯಕರ ಜತೆ ನಡೆಸುತ್ತಿರುವ ಮೊದಲ ಸಭೆ ಇದಾಗಿದೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ಮುಖಂಡರ ಜತೆ ಮೋದಿ ಚರ್ಚಿಸಲಿದ್ದಾರೆ.

ಈ ಬಗ್ಗೆ ಪತ್ರ ಬರೆದಿರುವ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಷಿ, ಲೋಕಸಭೆಯಲ್ಲಿ ಐವರು ಸದಸ್ಯರು ಇದ್ದು, ಸಭಾನಾಯಕರಾಗಿರುವವರು ಮಾತ್ರ ವಿಡಿಯೋ ಕಾನ್ಫರೆನ್ಸ್​ನಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳಿದ್ದಾರೆ.

ಸೋಂಕು ಹರಡದಂತೆ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು. ಮತ್ತು ಸೋಂಕಿನ ವಿರುದ್ಧದ ಹೋರಾಟದಲ್ಲಿ ಒಮ್ಮತದ ರಾಜಕೀಯ ಸಹಮತ ಮೂಡಿಸುವುದು ಸಭೆಯ ಉದ್ದೇಶ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.