ನವದೆಹಲಿ; ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿ ಜುಲೈ 23 ರಿಂದ 24 ರವರೆಗೆ ಯುಕೆಯಲ್ಲಿ ಇರುತ್ತಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ತಿಳಿಸಿದೆ. 2014 ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ಇದು ಯುಕೆಗೆ ಮೋದಿ ಅವರ ನಾಲ್ಕನೇ ಭೇಟಿಯಾಗಿದೆ.
ಜೊತೆಗೆ, ತಮ್ಮ ಪ್ರವಾಸದ ಎರಡನೇ ಹಂತದಲ್ಲಿ, ಪ್ರಧಾನಿ ಮೋದಿ ಅವರು ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಆಹ್ವಾನದ ಮೇರೆಗೆ ಮಾಲ್ಡೀವ್ಸ್‌ಗೆ ಭೇಟಿ ನೀಡಲಿದ್ದಾರೆ. ಅವರ ಭೇಟಿ ಜುಲೈ 25 ಮತ್ತು 26 ರಂದು ನಡೆಯಲಿದ್ದು, ಇದು ದ್ವೀಪ ರಾಷ್ಟ್ರಕ್ಕೆ ಅವರ ಮೂರನೇ ಪ್ರವಾಸವಾಗಲಿದೆ. ಮೊಹಮ್ಮದ್ ಮುಯಿಝು ಮಾಲ್ಡೀವ್ಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದು ಅವರ ಮೊದಲ ಭೇಟಿಯಾಗಿದೆ.
ಪ್ರಧಾನಿ ಮೋದಿ ಅವರು ತಮ್ಮ ಯುಕೆ ಭೇಟಿಯ ಸಮಯದಲ್ಲಿ ಕಿಂಗ್ ಚಾರ್ಲ್ಸ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ವಿವಿಧ ಪಾಲುದಾರರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದು, ವ್ಯಾಪಾರ ಒಪ್ಪಂದ, ದ್ವಿಪಕ್ಷೀಯ ಸಂಬಂಧಗಳಂತಹ ವಿಷಯಗಳನ್ನು ಪ್ರಸ್ತಾಪಿಸಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಕೇರಳ-ಕರ್ನಾಟಕ ಕರಾವಳಿಯಲ್ಲಿ ಭಾರೀ ಮಳೆ, ಮೀನುಗಾರರಿಗೆ ಎಚ್ಚರಿಕೆ! ಈ ರಾಜ್ಯದ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ | IMD
(ಏಜೆನ್ಸೀಸ್)
ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಮುಯಿಝು ನಡುವಿನ ಭೇಟಿಯು ಉಭಯ ರಾಷ್ಟ್ರಗಳ ನಡುವಿನ ಸಂಬಂಧದಲ್ಲಿ ಒಂದು ಪ್ರಮುಖ ಪ್ರಗತಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಈ ನಡುವೆ ಜುಲೈ 26 ರಂದು ನಡೆಯಲಿರುವ ಮಾಲ್ಡೀವ್ಸ್‌ನ 60ನೇ ಸ್ವಾತಂತ್ರ್ಯೋತ್ಸವದ ಆಚರಣೆಯಲ್ಲಿ ಪ್ರಧಾನಿ ಮೋದಿ 'ಗೌರವ ಅತಿಥಿ'ಯಾಗಿ ಭಾಗವಹಿಸಲಿದ್ದಾರೆ. ಜೊತೆಗೆ, ಪರಸ್ಪರ ಸಹಕಾರ, ಭಾರತ-ಮಾಲ್ಡೀವ್ಸ್ ಜಂಟಿ ದೃಷ್ಟಿಕೋನ ಮತ್ತು ಇತರ ಹಲವು ವಿಷಯಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಲಿದ್ದಾರೆ.