ನ್ಯೂಸ್

PM Modi| ಖಲಿಸ್ತಾನಿ ಉಗ್ರರ ವಿರುದ್ದ ಬಲವಾದ ಕ್ರಮ ಕೈಗೊಳ್ಳುವಂತೆ ಯುಕೆ ಪ್ರಧಾನಿಗೆ ಮನವಿ ಮಾಡಿದ ಪಿಎಂ ಮೋದಿ

PM Modi: ಖಲಿಸ್ತಾನಿ ಉಗ್ರಗಾಮಿ ಶಕ್ತಿಗಳ ವಿರುದ್ಧ ಕಾನೂನಿನ ವ್ಯಾಪ್ತಿಯಲ್ಲಿ ಬಲವಾದ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯು ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್​ರನ್ನು ಒತ್ತಾಯಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಗುರುವಾರ (ಸಪ್ಟೆಂಬರ್​,09) ತಿಳಿಸಿದೆ.

ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಪ್ರಧಾನಿ ಮೋದಿ ಇತ್ತೀಚೆಗೆ ಸ್ಟಾರ್ಮರ್​ರೊಂದಿಗಿನ ಭೇಟಿಯ ಸಂದರ್ಭದಲ್ಲಿ ಖಲಿಸ್ತಾನಿ ಚಟುವಟಿಕೆಗಳ ವಿಷಯವನ್ನು ಚರ್ಚಿಸಲಾಯಿತು. ಅಲ್ಲದೆ, ವಿದೇಶಗಳಲ್ಲಿ ಇಂತಹ ಗುಂಪುಗಳ ಚಟುವಟಿಕೆಗಳ ಬಗ್ಗೆ ಭಾರತ ತನ್ನ ಗಂಭೀರ ಕಳವಳವನ್ನು ವ್ಯಕ್ತಪಡಿಸುತ್ತದೆ ಎಂದು ಹೇಳಿದ್ದಾರೆ.

ಅಲ್ಲದೆ, ಪ್ರಜಾಪ್ರಭುತ್ವ ಸಮಾಜಗಳಲ್ಲಿ ಮೂಲಭೂತವಾದ ಮತ್ತು ಹಿಂಸಾತ್ಮಕ ಉಗ್ರವಾದಕ್ಕೆ ಯಾವುದೇ ಸ್ಥಾನವಿಲ್ಲ ಮತ್ತು ಈ ಸಮಾಜಗಳು ಒದಗಿಸುವ ಸ್ವಾತಂತ್ರ್ಯಗಳನ್ನು ದುರುಪಯೋಗಪಡಿಸಿಕೊಳ್ಳಲು ಬಿಡಬಾರದು ಎಂದು ಪ್ರಧಾನಿ ಹೇಳಿದ್ದಾರೆ ಎಂದು MEA ತಿಳಿಸಿದೆ. ಅಲ್ಲದೆ, ಭಾರತ-ಯುಕೆ ಲಭ್ಯವಿರುವ ಕಾನೂನು ಚೌಕಟ್ಟಿನೊಳಗೆ ಇಂತಹ ಅಂಶಗಳ ವಿರುದ್ಧ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುವ ಅವಶ್ಯಕತೆಯಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಕಳೆದ ಜುಲೈನಲ್ಲಿ ಉಭಯ ನಾಯಕರ ನಡುವಿನ ಚರ್ಚೆಗಳಲ್ಲಿ ಈ ವಿಷಯವನ್ನು ಈ ಹಿಂದೆ ಪ್ರಸ್ತಾಪಿಸಲಾಗಿತ್ತು. ಈ ಮಾತುಕತೆಯ ಸಮಯದಲ್ಲಿ ಮತ್ತೆ ಇದನ್ನು ಪ್ರಸ್ತಾಪಿಸಲಾಯಿತು ಎಂದು ಮಿಶ್ರಿ ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ, ಸಾಮಾಜಿಕ ಸಾಮರಸ್ಯ ಮತ್ತು ಸಾರ್ವಜನಿಕ ಸುರಕ್ಷತೆಗೆ ಧಕ್ಕೆ ತರುವ ಉಗ್ರಗಾಮಿ ಚಟುವಟಿಕೆಗಳನ್ನು ಎದುರಿಸುವಲ್ಲಿ ಪರಸ್ಪರ ಸಹಕಾರ ಮತ್ತು ಕಾನೂನು ಪ್ರಕ್ರಿಯೆಗಳಿಗೆ ಗೌರವದ ಮಹತ್ವವನ್ನು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ ಎಂದು ಮಿಶ್ರಿ ಹೇಳಿದ್ದಾರೆ.

ಕಳೆದ ಜುಲೈನಲ್ಲಿ ಮಾತನಾಡಿದ್ದ ಯುಕೆಯಲ್ಲಿ ಮೋದಿ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಪ್ರಜಾಪ್ರಭುತ್ವ ಸ್ವಾತಂತ್ರ್ಯಗಳನ್ನು ದುರುಪಯೋಗಪಡಿಸಿಕೊಳ್ಳುವ ಉಗ್ರಗಾಮಿ ಸಿದ್ಧಾಂತಗಳ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳುವಂತೆ ಬ್ರಿಟಿಷ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಯುನೈಟೆಡ್ ಕಿಂಗ್‌ಡಮ್​ನಲ್ಲಿ ಖಾಲಿಸ್ತಾನ್ ಪರ ಗುಂಪುಗಳ ಪ್ರಭಾವದ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ಹೇಳಿಕೆಗಳು ಬಂದಿವೆ. (ಏಜೆನ್ಸೀಸ್)