ನ್ಯೂಸ್

ದೆಹಲಿ ಚಲೋ; 2-3 ವರ್ಷಗಳಲ್ಲಿ ಪ್ರಧಾನಿ ಮೋದಿ ಹತ್ಯೆಯಾಗುತ್ತದೆ ಎಂದ ಪ್ರತಿಭಟನಾ ನಿರತ ವ್ಯಕ್ತಿ

ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ್ನು ಈಡೇರಿಸುವಂತೆ ಆಗ್ರಹಿಸಿ ರೈತರು ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಆರನೇ ದಿನಕ್ಕೆ ಕಾಲಿಟ್ಟಿದೆ. ಆದರೆ, ರೈತರ ಪ್ರತಿಭಟನೆ ಒಂದಿಲ್ಲೊಂದು ಕಾರಣಕ್ಕೆ ವಿವಾದಕ್ಕೀಡಾಗುತ್ತಿದ್ದು, ಇದೀಗ ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡುವ ವಿಚಾರವಾಗಿ ಸದ್ದು ಮಾಡುತ್ತಿದೆ.

ಪ್ರತಿಭಟನೆಯಲ್ಲಿ ಭಾಗಿಯಾಗಿರುವ ರೈತನೋರ್ವ ಮುಂದಿನ 2-3 ವರ್ಷದೊಳಗೆ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಯಾಗುತ್ತದೆ ಎಂದು ಹೇಳಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೋರ್ವ ಮುಂದಿನ 2-3 ವರ್ಷಗಳಲ್ಲಿ ಪ್ರಧಾನಿ ಅವರನ್ನು ಕೊಲ್ಲಲಾಗುತ್ತದೆ. ಮುಂದಿನ ಕೆಲವೇ ದಿನಗಳಲ್ಲಿ ಈ ಮಾಹಿತಿ ಹೊರಬೀಳಲಿದೆ. ಕೆಲವು ವಿಚಾರಗಳನ್ನು ನಾವು ಎಲ್ಲಿಯವರೆಗೂ ಸಹಿಸಿಕೊಳ್ಳುತ್ತೇವೋ ಅಲ್ಲಿಯವರೆಗೂ ಏನು ಆಗುವುದಿಲ್ಲ ಎಂದು ಹೇಳುತ್ತಿರುವುದನ್ನು ವೈರ​ಲ್ ವಿಡಿಯೋದಲ್ಲಿ ನೋಡಬಹುದಾಗಿದೆ.

ಈ ಹಿಂದೆ ರೈತರ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನು ಕುಗ್ಗಿಲಸು ಮಾಡಲಾಗುತ್ತಿದೆ ಎಂದು ರೈತ ನಾಯಕ ಜಗಜೀತ್ ಸಿಂಗ್ ದಲ್ಲೆವಾಲ್ ನೀಡಿದ್ದ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು ಮತ್ತು ಖಂಡನೆಗೆ ಗುರಿಯಾಗಿತ್ತು. ರೈತ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಕುಖ್ಯಾತ ಗ್ಯಾಂಗ್​ಸ್ಟರ್​ ಸಹ ಭಾಗಿಯಾಗಿದ್ದ. ಇದೀಗ ವ್ಯಕ್ತಿಯೋರ್ವ ಪ್ರಧಾನಿ ಮೋದಿ ಅವರ ಹತ್ಯೆ ಕುರಿತು ಹೇಳಿಕೆ ನೀಡಿದ್ದು, ಸರ್ಕಾರ ಕ್ರಮಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಿದೆ.