ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ-ಜಿ) ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು ಒದಗಿಸಲು ಎನ್ಡಿಎ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಇದನ್ನೂ ಓದಿ: ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರ ದಾಳಿ: ಕೃತ್ಯದ ಹೊಣೆ ಹೊತ್ತುಕೊಂಡ ಉಗ್ರ ಸಂಘಟನೆ! ಮತ್ತೆ ಬೆದರಿಕೆ!
ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ ತಮ್ಮ ನೂತನ ಸಚಿವ ಸಂಪುಟದ ಮೊದಲ ಸಭೆ ನಡೆಸಿದರು. ಪ್ರಧಾನಿ ಮೋದಿ ಅವರು ಮೂರನೇ ಬಾರಿಗೆ ದೇಶದ ಪ್ರಧಾನಿಯಾದ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಮೊದಲ ಕ್ಯಾಬಿನೆಟ್ ಸಭೆಯಲ್ಲಿ ದೇಶದ ವಸತಿ ರಹಿತರಿಗೆ ಮನೆ ನಿರ್ಮಾಣಕ್ಕೆ ನೆರವು ನೀಡಲು ಸರ್ಕಾರ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ 3 ಕೋಟಿ ಹೆಚ್ಚುವರಿ ಗ್ರಾಮೀಣ ಮತ್ತು ನಗರ ಕುಟುಂಬಗಳಿಗೆ ಮನೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ನೆರವು ನೀಡಲು ನಿರ್ಧರಿಸಲಾಯಿತು. ಅರ್ಹ ಕುಟುಂಬಗಳ ಸಂಖ್ಯೆಯಲ್ಲಿನ ಹೆಚ್ಚಳ ಮಾಡಲಾಗಿದೆ. ಪಿಎಂ ಅವಾಸ್ ಯೋಜನೆಯಡಿ ನಿರ್ಮಾಣವಾದ ಮನೆಗೆ ಎಲ್ಲ ಸೌಲಭ್ಯ ನೀಡಲಾಗುವುದು. ಎಲ್‌ಪಿಜಿ ಸಿಲಿಂಡರ್, ವಿದ್ಯುತ್, ಕುಡಿಯುವ ನೀರು, ಶೌಚಾಲಯ ಸೌಲಭ್ಯ ನೀಡಲು ನಿರ್ಧಾರ ಮಾಡಲಾಗಿದೆ.
ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮನೆಗಳ ನಿರ್ಮಾಣಕ್ಕೆ ನೆರವು ನೀಡುವ ಪಿಎಂಎವೈ ಯೋಜನೆಯನ್ನು ಕೇಂದ್ರ ಸರ್ಕಾರವು 2015-16ರಲ್ಲಿ ಜಾರಿಗೊಳಿಸಿದೆ. ಈ ಯೋಜನೆ ಅಡಿಯಲ್ಲಿ ಇದುವರೆಗೆ 4.21 ಕೋಟಿ ಮನೆಗಳು ನಿರ್ಮಾಣವಾಗಿವೆ.