ನ್ಯೂಸ್

ಏಪ್ರಿಲ್​ 8, 9 ರಂದು ಪ್ರಧಾನಿ ಮೋದಿ ಮೈಸೂರು ಪ್ರವಾಸದ ಸಂಪೂರ್ಣ ಮಾಹಿತಿ ಇಲ್ಲಿದೆ…

ರಮೇಶ್​ ಕುಮಾರ್​​ ಬಿ ಎಡಮೋಳೆ

ಮೈಸೂರು: ಪ್ರಧಾನಿ ಮೋದಿ ಮತ್ತೊಮ್ಮೆ ರಾಜ್ಯಕ್ಕೆ ಬರಲಿದ್ದು, ಏಪ್ರಿಲ್ 8 ಹಾಗೂ 9 ಎರಡು ದಿನಗಳು ಮೈಸೂರಿನಲ್ಲಿ ಪ್ರವಾಸ ಮಾಡಲಿದ್ದಾರೆ. ಪ್ರಧಾನಿ ಮೋದಿ ಪ್ರವಾಸ ಕೈಗೊಳ್ಳುವ ಪಟ್ಟಿ ದಿಗ್ವಿಜಯ ನ್ಯೂಸ್​​ಗೆ ಲಭ್ಯವಾಗಿದೆ.

ಹುಲಿ ಸಂರಕ್ಷಣಾ ಯೋಜನೆಗೆ 50 ವರ್ಷ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಮೈಸೂರಿಗೆ ಆಗಮಿಸಲಿದ್ದಾರೆ. ಏಪ್ರಿಲ್ 8ರ ಸಂಜೆ 8ಗಂಟೆಗೆ ಮೈಸೂರಿಗೆ ಬಂದಿಳಿಯಲಿದ್ದಾರೆ. ಬಳಿಕ ರ್ಯಾಡಿಷನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಏಪ್ರಿಲ್ 9ರ ಬೆಳಗ್ಗೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಬಂಡಿಪುರಕ್ಕೆ ಪಯಣ ಬೆಳೆಸಲಿದ್ದಾರೆ. ಬೆಳಗ್ಗೆ 7.30ರ ಸುಮಾರಿಗೆ ಬಂಡೀಪುರಕ್ಕೆ ಭೇಟಿ ನೀಡಿ ಸಫಾರಿ ಮಾಡಲಿದ್ದಾರೆ. 10 ಗಂಟೆ ಸುಮಾರಿಗೆ ನೀಲಗಿರೀಸ್‌‌ಗೆ ಭೇಟಿ ನೀಡಲಿದ್ದು, ಬೆಳಗ್ಗೆ 10.30ಕ್ಕೆ ಮೈಸೂರಿಗೆ ವಾಪಸ್ ಆಗಲಿದ್ದಾರೆ.

ಇದಾದ ಬಳಿಕ ಕರ್ನಾಟಕ ಮುಕ್ತ ವಿವಿ ಘಟಿಕೋತ್ಸವ ಭವನಕ್ಕೆ ಆಗಮಿಸುವ ಪ್ರಧಾನಿ ಮೋದಿ 11 ಗಂಟೆಗೆ ಹುಲಿ ಯೋಜನೆ 50ನೇ ವರ್ಷದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ದೆಹಲಿಗೆ ಪಯಣ ಬೆಳೆಸಲಿದ್ದಾರೆ. (ಏಜೆನ್ಸೀಸ್​)